Breaking News

ಕಂದಾಯ, ಪಂಚಾಯಿತಿ ಅಧಿಕಾರಿಗಳು ಲಂಚ ಕೇಳಿದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

Spread the love

ನಕಪುರ: ಯಾರೊಬ್ಬರೂ ಒಂದು ರೂಪಾಯಿ ಲಂಚ ಕೊಡಲು ಹೋಗಬೇಡಿ. ಲಂಚ ಕೇಳುವವರ ವಿರುದ್ಧ ದೂರು ನೀಡಲು ಎಲ್ಲಾ ಸರ್ಕಾರಿ ಕಚೇರಿಗಳ ಮುಂದೆ ದೂರವಾಣಿ ಸಂಖ್ಯೆಯನ್ನು ಶೀಘ್ರದಲ್ಲೇ ಹಾಕಲಿದ್ದೇವೆ” ಎಂದು ತಿಳಿಸಿದರು.

ಕನಕಪುರದಲ್ಲಿ ನಡೆದ ಜನಸಂಪರ್ಕ ಸಭೆಗೂ ಮುಂಚಿತವಾಗಿ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು;

“ಕಂದಾಯ, ಪಂಚಾಯಿತಿ ಅಧಿಕಾರಿ ಸೇರಿದಂತೆ ಯಾವುದೇ ಸರ್ಕಾರಿ ಅಧಿಕಾರಿಗಳು ಲಂಚ ಕೇಳಿದರೆ ನೇರವಾಗಿ ಜಿಲ್ಲಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ದೂರು ನೀಡಬಹುದು. ಜನರ ಅಹವಾಲುಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು. ನಮ್ಮ ತಾಲ್ಲೂಕಿನಲ್ಲಿ ಉತ್ತಮವಾದ ಆಡಳಿತ ನಡೆಯಬೇಕು. ಈ ಹಿಂದಿನ ತಹಶೀಲ್ದಾರ್ ಇದ್ದಾಗ ಒಂದಷ್ಟು ತೊಂದರೆಗಳು ಇದ್ದವು.

ಕನಕಪುರ- ರಾಮನಗರ ಜಿಲ್ಲೆಯ ಜನರ ಎಲ್ಲ ಜಮೀನುಗಳಿಗೆ ಸೂಕ್ತ ದಾಖಲೆಗಳನ್ನು ಅಧಿಕಾರಿಗಳು ಮಾಡಿಕೊಡಬೇಕು. ಡ್ರೋನ್ ತಂತ್ರಜ್ಞಾನದ ಮೂಲಕ ಜಮೀನುಗಳ ಸರ್ವೇ ಕಾರ್ಯ ನಡೆಸಲಾಗುತ್ತಿದೆ. ನಮ್ಮ ಜಿಲ್ಲೆಯಲ್ಲಿ ಈ ಕಾರ್ಯವನ್ನು ಉಯ್ಯಂಬಳ್ಳಿಯಿಂದ ಪ್ರಾರಂಭ ಮಾಡಲಾಗಿದೆ. ಕೆಲವೇ ದಿನಗಳಲ್ಲಿ ಜಮೀನಿನ ಪೋಡಿ- ಪಹಣಿ ದಾಖಲೆಗಳು ನಿಮ್ಮದೇ ಮೊಬೈಲ್ನಲ್ಲಿ ದೊರೆಯುತ್ತದೆ.

ಈಗಾಗಲೇ ಭೂಮಿ ಯೋಜನೆಯ ಅಡಿ ಪಹಣಿ- ಪೋಡಿ ದಾಖಲೆಗಳು ಸಿಗುತ್ತಿವೆ. ದಿಶಾ ವೆಬ್ಸೈಟಿನಲ್ಲಿ ನಿಮ್ಮ ಜಮೀನಿನ ವಾಸ್ತವ ಸ್ಥಿತಿ ತಿಳಿಯುವಂತಹ ಕಾರ್ಯಕ್ರಮ ರೂಪಿಸಲಾಗಿದೆ. ಬೆಂಗಳೂರು ನಗರದಲ್ಲಿ ಆಸ್ತಿಗಳ ಡಿಜೀಟಲೀಕರಣ ಮತ್ತು ಮರು ಸರ್ವೇ ಕೆಲಸ ಪ್ರಗತಿಯಲ್ಲಿದೆ. ಕೆಲವೇ ದಿನಗಳಲ್ಲಿ ನನ್ನ ಕ್ಷೇತ್ರದಲ್ಲೂ ಜನರಿಗೆ ಈ ಸೌಲಭ್ಯ ದೊರೆಯಲಿದೆ. ಕಂದಾಯ ಇಲಾಖೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು, ತೊಂದರೆಗಳನ್ನು ಶೀಘ್ರ ಬಗೆಹರಿಸಿಬೇಕು ಎಂದು ಸೂಚನೆ ನೀಡಿದ್ದೇನೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ