Breaking News

ನಾಲ್ಕು ರಾಜ್ಯಗಳ ಪ್ರಮುಖ ನಾಯಕರ ಚುನಾವಣಾ ಫಲಿತಾಂಶದ ಟ್ರೆಂಡ್​ ಇಲ್ಲಿದೆ.

Spread the love

ಹೈದರಾಬಾದ್​: ತೆಲಂಗಾಣದಲ್ಲಿ ಮುಖ್ಯಮಂತ್ರಿ ಹಾಗೂ ಬಿಆರ್​ಎಸ್​ ನಾಯಕ ಕೆ. ಚಂದ್ರಶೇಖರ್​ ರಾವ್​ ಕಾಮರೆಡ್ಡಿ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ.

ಇದೇ ಕ್ಷೇತ್ರದಲ್ಲಿ ಕಾಂಗ್ರೆಸ್​ ನಾಯಕ ರೇವಂತ್​ ರೆಡ್ಡಿ ಮುನ್ನಡೆ ಸಾಧಿಸಿದ್ದಾರೆ. ಕೋಡಂಗಲ್​ ಕ್ಷೇತ್ರದಲ್ಲೂ ಸ್ಪರ್ಧಿಸಿರುವ ಪ್ರದೇಶ ಕಾಂಗ್ರೆಸ್​ ಅಧ್ಯಕ್ಷ ರೇವಂತ್​​ ರೆಡ್ಡಿ ಅಲ್ಲೂ ಮುನ್ನಡೆ ಸಾಧಿಸಿದ್ದಾರೆ. ಇದೇ ವೇಳೆ ಮತ್ತೊಂದು ಕ್ಷೇತ್ರ ಗಜ್ವಾಲ್​ನಲ್ಲಿ ಸ್ಪರ್ಧಿಸಿರುವ ಮುಖ್ಯಮಂತ್ರಿ ಕೆಸಿಆರ್, ಆ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಮುಖ್ಯಮಂತ್ರಿ ಕೆಸಿಆರ್​ ಪುತ್ರ ಕೆ ಟಿ ರಾಮರಾವ್​ ಸಿರ್ಸಿಲಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್​ ನಾಯಕ ಭಟ್ಟಿ ವಿಕ್ರಮಾರ್ಕ ಮಲ್ಲು ಅವರು ಮಧಿರ ಕ್ಷೇತ್ರದಲ್ಲಿ ತಮ್ಮ ಪ್ರತಿಸ್ಪರ್ಧಿಗಿಂತ ಮುನ್ನಡೆಯಲ್ಲಿದ್ದಾರೆ.

ಬಿಜೆಪಿ ಪ್ರಮುಖ ನಾಯಕ ಬಂಡಿ ಸಂಜಯ್ ಅವರು​ ಕರೀಂನಗರ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ.

ಸಿದ್ದಿಪೇಟ್​ ಕ್ಷೇತ್ರದಲ್ಲಿ ಬಿಆರ್​ಎಸ್​ನ ಹರೀಶ್​ ರಾವ್​ ಮುನ್ನಡೆ ಪಡೆದುಕೊಂಡಿದ್ದಾರೆ.

ಹುಝೂರಾಬಾದ್​ ಕ್ಷೇತ್ರದಲ್ಲಿ ಬಿಜೆಪಿ ನಾಯಕ ಈಟಲ ರಾಜೇಂದರ್​ ಹಿನ್ನಡೆ ಸಾಧಿಸಿದ್ದಾರೆ. ಮತ್ತೊಂದೆಡೆ ಸ್ಪರ್ಧಿಸಿರುವ ಗಜ್ವಾಲ್​ ಕ್ಷೇತ್ರದಲ್ಲಿಯೂ ಹಿನ್ನಡೆ ಸಾಧಿಸಿದ್ದಾರೆ.

ಹುಝೂರ್​ನಗರ ಕ್ಷೇತ್ರದಲ್ಲಿ ಕಾಂಗ್ರೆಸ್​ ನಾಯಕ ಉತ್ತಮ್​ ಕುಮಾರ್​ ರೆಡ್ಡಿ ಮುನ್ನಡೆ ಸಾಧಿಸಿದ್ದಾರೆ.

ಜುಬ್ಲಿಹಿಲ್ಸ್​ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಹಾಗೂ ಮಾಜಿ ಕ್ರಿಕೆಟಿಗ ಮಹಮ್ಮದ್​ ಅಜರುದ್ದೀನ್​​​​​ ​ಮುನ್ನಡೆ ಅನುಭವಿಸುತ್ತಿದ್ದಾರೆ.

ರಾಜಸ್ಥಾನ:

ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಸರ್ದಾರ್ಪುರ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ.

ಕಾಂಗ್ರೆಸ್​ ಹಿರಿಯ ನಾಯಕ ಸಚಿನ್​ ಪೈಲಟ್​ ಟೋಂಕ್​ ಕ್ಷೇತ್ರದಲ್ಲಿ ಮುನ್ನಡೆ ಅನುಭವಿಸುತ್ತಿದ್ದಾರೆ.

ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಝಾಲರ್​ಪಾಠನ್​​ ಕ್ಷೇತ್ರದಲ್ಲಿ ಪ್ರತಿಸ್ಪರ್ಧಿಗಿಂತ ಮುಂದಿದ್ದಾರೆ.

ಬಿಜೆಪಿ ನಾಯಕ ರಾಜ್ಯವರ್ಧನ್​ ರಾಥೋಡ್​ ಝೋತ್​ವಾರ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ.

ಮಧ್ಯಪ್ರದೇಶ:

ಮಧ್ಯಪ್ರದೇಶದಲ್ಲಿ ಮಾಮಾ ಎಂದೇ ಪ್ರಸಿದ್ಧಿಯಾಗಿರುವ ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ ಬುಧಾನಿ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಇಂದೋರ್​ ಕ್ಷೇತ್ರದಲ್ಲಿ ಬಿಜೆಪಿ ನಾಯಕ ಕೈಲಾಶ್​ ವಿಜಯ್​ ವರ್ಗೀಯಾ ಮುನ್ನಡೆ ಸಾಧಿಸಿದ್ದಾರೆ

ಕಾಂಗ್ರೆಸ್​ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಕಮಲ್​ನಾಥ್​ ಚಿಂದ್ವಾರ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ.

ಛತ್ತೀಸ್​ಗಢ:

ಛತ್ತೀಸ್​ಗಢದಲ್ಲಿ ಮುಖ್ಯಮಂತ್ರಿ ಭೂಪೇಶ್ ಬಘೇಲ್​​ ಪಾಠನ್​​ ಕ್ಷೇತ್ರದಲ್ಲಿ, ಪ್ರತಿಸ್ಪರ್ಧಿ ಹಾಗೂ ಸಂಬಂಧಿಯಿಂದ ಹಿನ್ನಡೆಯಲ್ಲಿದ್ದಾರೆ.

ಇನ್ನು ಮಾಜಿ ಸಿಎಂ ಹಾಗೂ ಬಿಜೆಪಿ ನೇತಾರ ರಮಣ್​ ಸಿಂಗ್ ರಾಜನಂದಗಾಂವ್​ ಕ್ಷೇತ್ರದಲ್ಲಿ​ ಪ್ರತಿಸ್ಪರ್ಧಿಗಿಂತ ಮುನ್ನಡೆ ಸಾಧಿಸಿದ್ದಾರೆ.

ಉಪಮುಖ್ಯಮಂತ್ರಿ ಟಿ.ಎಸ್.​ ಸಿಂಘ್​​ ದೇವ್​ ಅಂಬಿಕಾಪುರ ಕ್ಷೇತ್ರದಲ್ಲಿ ಹಿನ್ನಡೆ ಕಂಡಿದ್ದಾರೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ