Home / ರಾಜಕೀಯ / ಬಿಜೆಪಿಗೆ ಉತ್ತರ ಭಾರತದ ಮೂರು ರಾಜ್ಯಗಳ ಚುನಾವಣ ಫಲಿತಾಂಶ ಉತ್ಸಾಹ ಇಮ್ಮಡಿಗೊಳಿಸಿದೆ.

ಬಿಜೆಪಿಗೆ ಉತ್ತರ ಭಾರತದ ಮೂರು ರಾಜ್ಯಗಳ ಚುನಾವಣ ಫಲಿತಾಂಶ ಉತ್ಸಾಹ ಇಮ್ಮಡಿಗೊಳಿಸಿದೆ.

Spread the love

ಹೊಸದಿಲ್ಲಿ: 2024 ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಪೂರ್ಣ ಬಹುಮತ ಪಡೆದು ಮೂರನೇ ಬಾರಿಗೆ ಅಧಿಕಾರ ಹಿಡಿಯುವ ಹವಣಿಕೆಯಲ್ಲಿರುವ ಬಿಜೆಪಿಗೆ ಉತ್ತರ ಭಾರತದ ಮೂರು ರಾಜ್ಯಗಳ ಚುನಾವಣ ಫಲಿತಾಂಶ ಉತ್ಸಾಹ ಇಮ್ಮಡಿಗೊಳಿಸಿದೆ.

ಎಲ್ಲ ಸವಾಲುಗಳನ್ನು, ಸಮೀಕ್ಷೆಗಳನ್ನೂ ಮೀರಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ ಗಢ ದಲ್ಲಿ ಬಿಜೆಪಿ ಅಧಿಕಾರಕ್ಕೇರಿದೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಉತ್ತರ ಭಾರತದಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಲೆಕ್ಕಾಚಾರ ಹಾಕಿಯೇ ಜಿದ್ದಿಗೆ ಬಿದ್ದು ರಣತಂತ್ರ ರೂಪಿಸಿತ್ತು. ಕೇಂದ್ರ ಸಚಿವರು, ಸಂಸದರನ್ನು ಕಣಕ್ಕಿಳಿಸಿತ್ತು.

ಕೇಸರಿ ಪಾಳಯದ ನಿರೀಕ್ಷೆ ಮೀರಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ ಗಢ ದಲ್ಲಿ ಮತದಾರ ಪ್ರಭುಗಳು ಬಿಜೆಪಿಯ ಕೈಹಿಡಿದಿದ್ದಾರೆ. ಮೂರು ರಾಜ್ಯಗಳಲ್ಲಿ ಒಟ್ಟು ಇರುವ ಲೋಕಸಭಾ ಕ್ಷೇತ್ರಗಳು 65, ಮಧ್ಯಪ್ರದೇಶ(29), ರಾಜಸ್ಥಾನ( 25) ಮತ್ತು ಛತ್ತೀಸ್ ಗಢ ದಲ್ಲಿ(11) ಸ್ಥಾನಗಳಿವೆ. ಈ ಎಲ್ಲಾ ಸ್ಥಾನಗಳನ್ನು ಕ್ಲೀನ್ ಸ್ವೀಪ್ ಮಾಡುವ ಗುರಿಯನ್ನು ಬಿಜೆಪಿ ಇಟ್ಟುಕೊಂಡಿದೆ. 2019 ರಲ್ಲಿ ಮಧ್ಯಪ್ರದೇಶದಲ್ಲಿ ಬಿಜೆಪಿ 28 ಸ್ಥಾನಗಳನ್ನು , ರಾಜಸ್ಥಾನದಲ್ಲಿ 24 ಮತ್ತು ಛತ್ತೀಸ್ ಗಢ ದಲ್ಲಿ 9 ಗೆದ್ದಿತ್ತು. ಈ ಫಲಿತಾಂಶ ಈ ಸ್ಥಾನಗಳನ್ನು ಉಳಿಸಿಕೊಳ್ಳುವ ವಿಶ್ವಾಸ ತುಂಬಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ