Breaking News

4 ರಾಜ್ಯಗಳ ಚುನಾವಣಾ ಫಲಿತಾಂಶ, ಕರ್ನಾಟಕ ಕಾಂಗ್ರೆಸ್​ಗೂ ಎಚ್ಚರಿಕೆ ಗಂಟೆ: ಬಸವರಾಜ ಬೊಮ್ಮಾಯಿ

Spread the love

ಬೆಂಗಳೂರು: ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಲೋಕಸಭೆ ಚುನಾವಣೆಯ ದಿಕ್ಸೂಚಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಮತ್ತಷ್ಟು ಹೆಚ್ಚಾಗಿದ್ದು, ಕರ್ನಾಟಕ ಕಾಂಗ್ರೆಸ್​ಗೂ ಇದು ಎಚ್ಚರಿಕೆಯ ಗಂಟೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಆರ್.ಟಿ ನಗರ ನಿವಾಸದಲ್ಲಿ ಇಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಪಂಚರಾಜ್ಯಗಳ ಚುನಾವಣೆ ಲೋಕಸಭೆ ಚುನಾವಣೆಗಿಂತ ಮೊದಲು ಬಂದಿರುವುದರಿಂದ ಸೆಮಿ ಫೈನಲ್ ಅಂತ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಂತೂ ಮೇಲಿಂದ‌ಮೇಲೆ ಹೇಳಿದ್ದಾರೆ. ಈ ಫಲಿತಾಂಶ ಲೋಕಸಭೆ ಚುನಾವಣೆಗೆ ಸ್ಪಷ್ಟ ಸಂದೇಶ ನೀಡಿದೆ ಎಂದರು.

ಮಧ್ಯಪ್ರದೇಶದಲ್ಲಿ ಮೂರನೇ ಎರಡರಷ್ಟು ಬಹುಮತ ಪಡೆದಿದ್ದೇವೆ. ಛತ್ತೀಸ್​ಘಡ, ರಾಜಸ್ಥಾನದಲ್ಲೂ ಸ್ಪಷ್ಟ ಬಹುಮತ ಪಡೆದಿದ್ದೇವೆ. ತೆಲಂಗಾಣದಲ್ಲಿ ನಮ್ಮ ಸಂಖ್ಯೆ 1 ರಿಂದ 8ಕ್ಕೆ ಏರಿದ್ದೇವೆ. ಈ‌ ಫಲಿತಾಂಶಕ್ಕೆ ಕಾರಣವಾಗಿರುವ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಅಮಿತ್ ಶಾ, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್​ ಸೇರಿದಂತೆ ಎಲ್ಲ ನಾಯಕರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.

ಈ ಚುನಾವಣೆಯಲ್ಲಿ ಕಾಂಗ್ರೆಸ್​ನವರು ಪ್ರಧಾನಿ ಮೋದಿ ಅವರನ್ನು ಟಾರ್ಗೆಟ್ ಮಾಡಿದ್ದರು. ಜಾತಿ ರಾಜಕಾರಣ, ಸನಾತನ ಧರ್ಮದ ವಿರುದ್ಧ ಅಪಪ್ರಚಾರ ಮಾಡಿದ್ದಾರೆ. ಗ್ಯಾರೆಂಟಿಗಳನ್ನು ಆಪ್ ಆರಂಭ ಮಾಡಿತ್ತು. ಅದನ್ನು ಕರ್ನಾಟಕದಲ್ಲಿ ಕಾಂಗ್ರೆಸ್ ಮುಂದುವರೆಸಿತು. ಸುಳ್ಳು ಹೇಳಿ ಜನರ ವಿಶ್ವಾಸ ಗಳಿಸುವ ಪ್ರಯತ್ನ ಮಾಡಿದರು. ಗ್ಯಾರೆಂಟಿಗಳನ್ನು ಜನ ತಿರಸ್ಕರಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದಲ್ಲೂ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲುತ್ತದೆ ಎಂದು ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ