Breaking News

ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆ ವಿಜಯೇಂದ್ರ ಅವರೇ ಅಭ್ಯರ್ಥಿಯಾಗಲಿ

Spread the love

ಬೆಂಗಳೂರು – ಜೆಡಿಎಸ್ ಶಾಸಕ ನಾರಾಯಣರಾವ್ ನಿಧನದಿಂದ ತೆರವಾಗಿರುವ ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆ ಸಧ್ಯವೇ ನಡೆಯಲಿದೆ. ಯಾವುದೇ ಸಂದರ್ಭದಲ್ಲಿ ಚುನಾವಣೆ ಘೋಷಣೆಯಾಗಬಹುದು.

ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಸವಕಲ್ಯಾಣಕ್ಕೆ ಇನ್ನು 3 -4 ದಿನದಲ್ಲಿ ಎಂಟ್ರಿ ಕೊಡಲಿದ್ದಾರೆ. ವಿಜಯೇಂದ್ರ ಅವರನ್ನು ಬಯವಕಲ್ಯಾಣ ಚುನಾವಣೆ ಉಸ್ತುವಾರಿ ಮಾಡಲು ಬಿಜೆಪಿ ನಿರ್ಧರಿಸಿದೆ. ಹಾಗಾಗಿ ಈಗಿನಿಂದಲೇ ಕಾರ್ಯ ಆರಂಭಿಸುವಂತೆ ಸೂಚಿಸಲಾಗಿದೆ.

ವಿಜಯೇಂದ್ರ 13 ಅಥವಾ 14ರಂದು ಬಸವಕಲ್ಯಾಣಕ್ಕೆ ತೆರಳಿ ಅಲ್ಲಿನ ಬಿಜೆಪಿ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಲಿರುವ ಅವರು, ಅಭ್ಯರ್ಥಿ ಕುರಿತು ಅಭಿಪ್ರಾಯ ಸಂಗ್ರಹಿಸಬಹುದು.

ಕೆಲವರು ವಿಜಯೇಂದ್ರ ಅವರೇ ಅಭ್ಯರ್ಥಿಯಾಗಲಿ ಎನ್ನುವ ಒತ್ತಡ ಹೇರಿತ್ತಿದ್ದಾರೆ. ಆದರೆ ಈ ಬಗ್ಗೆ ವಿಜಯೇಂದ್ರ ತಮ್ಮ ಅಭಿಪ್ರಾಯ ಸ್ಪಷ್ಟಪಡಿಸಿಲ್ಲ. ಚುನಾವಣೆಗೆ ನಿಲ್ಲುವ ಬಗ್ಗೆ ನಾನು ಯೋಚಿಸಿಲ್ಲ, ಆದರೆ ಪಕ್ಷ ಸಂಘಟನೆ, ಯಾರೇ ಅಭ್ಯರ್ಥಿಯಾದರೂ ಗೆಲ್ಲಿಸಿಕೊಂಡು ಬರುವ ಕೆಲಸ ಮಾಡುತ್ತೇನೆ ಎಂದಿದ್ದಾರೆ.

ಕೆ.ಆರ್.ಪೇಟೆಯಲ್ಲಿ ಬಿಜೆಪಿಗೆ ಅನಿರೀಕ್ಷಿತ ಗೆಲುವು ತಂದುಕೊಟ್ಟಿರುವ ವಿಜಯೇಂದ್ರ ಅವರನ್ನು ಶಿರಾ ಉಪಚುನಾವಣೆಗೂ ಬಳಸಿಕೊಳ್ಳಲಾಗಿತ್ತು. ಇದೀಗ ಬಸವಕಲ್ಯಾಣ ಉಸ್ತುವಾರಿಯನ್ನಾಗಿಯೂ ನೇಮಿಸಲು ನಿರ್ಧರಿಸಲಾಗಿದೆ.

 


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ