Breaking News

ಅಧಿವೇಶನದ ಕರ್ತವ್ಯಕ್ಕಾಗಿ ನಿಯೋಜನೆಗೊಂಡಿರುವ ಪೊಲೀಸರ ವಸತಿಗೆ ನಿರ್ಮಿಸಿರುವ ಜರ್ಮನ್ ಟೆಂಟ್​ಗೆ ಡಿಜಿ ಐಜಿಪಿ ಅಲೋಕ್‌ ಮೋಹನ್ ಭೇಟಿ

Spread the love

ಬೆಳಗಾವಿ: ತಾಲೂಕಿನ ಅಲಾರವಾಡ ಗ್ರಾಮದ ಹೊರ ವಲಯದಲ್ಲಿ ಚಳಿಗಾಲದ ಅಧಿವೇಶನದ ಕರ್ತವ್ಯಕ್ಕಾಗಿ ನಿಯೋಜನೆಗೊಂಡಿರುವ ಪೊಲೀಸರ ವಸತಿಗೆ ನಿರ್ಮಿಸಿರುವ ಜರ್ಮನ್ ಟೆಂಟ್​ಗೆ ಡಿಜಿ – ಐಜಿಪಿ ಅಲೋಕ್​ ಮೋಹನ್ ಅವರು ಭೇಟಿ ನೀಡಿ, ವ್ಯವಸ್ಥೆ ಪರಿಶೀಲನೆ ನಡೆಸಿದರು.

10 ದಿನಗಳ ಚಳಿಗಾಲದ ಅಧಿವೇಶನಕ್ಕೆ ಅಧಿವೇಶನ ಕರ್ತವ್ಯಕ್ಕಾಗಿ ನಿಯೋಜನೆಗೊಂಡಿರುವ ಪೊಲೀಸರ ವಸತಿಗೆ ಜರ್ಮನ್​ ಟೆಂಟ್ ಮೂಲಕ ಟೌನ್ ಶಿಪ್ ನಿರ್ಮಿಸಲಾಗಿದೆ. ಟೆಂಟ್​ಗಳಿಗೆ ಭೇಟಿ ನೀಡಿದ‌ ಅಲೋಕ್​ ಮೋಹನ್ ಅವರು ಪೊಲೀಸ್ ಸಿಬ್ಬಂದಿಗಳನ್ನು ಮಾತನಾಡಿಸಿ ಇಲ್ಲಿ ಮಾಡಿರುವ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದರು. ಯಾವುದೇ ರೀತಿ ತೊಂದರೆ ಆಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಗಾದಿ, ಹೊದಿಕೆ, ದಿಂಬು, ಊಟ, ಸ್ನಾನಕ್ಕೆ ಬಿಸಿನೀರು ಸೇರಿ ಎಲ್ಲಾ ವ್ಯವಸ್ಥೆಯನ್ನು ಮಾಡುವಂತೆ ತಿಳಿಸಿದರು. ಚಳಿ ಹೆಚ್ಚಿರುವ ಹಿನ್ನೆಲೆ ಸಿಬ್ಬಂದಿಗಳ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿಜಿ- ಐಜಿಪಿ ಅಲೋಕ ಮೋಹನ್ ಅವರು, ನಾಳೆಯಿಂದ ಅಧಿವೇಶನ ಆರಂಭವಾಗಲಿರುವುದರಿಂದ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. 6 ಸಾವಿರ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಇನ್ನು ವಿವಿಧ ಕಡೆ ನಿರ್ಮಿಸಿರುವ ಕ್ಯಾಂಪ್​ಗಳಲ್ಲಿ ಒಳ್ಳೆಯ ರೀತಿ ವ್ಯವಸ್ಥೆ ಮಾಡಿದ್ದೇವೆ ಎಂದರು. ಈ ವೇಳೆ ಐಜಿಪಿ ವಿಕಾಸಕುಮಾರ, ನಗರ ಪೊಲೀಸ್ ಆಯುಕ್ತ ಎಸ್.ಎನ್‌.ಸಿದ್ದರಾಮಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಸೇರಿ ಹಿರಿಯ ಅಧಿಕಾರಿಗಳು ಇದ್ದರು.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ