Breaking News

ಸುವರ್ಣಸೌಧದಲ್ಲಿ ಕೈಗೊಳ್ಳಲಾಗಿರುವ ಸಿದ್ಧತೆಗಳನ್ನು ಪರಿಶೀಲಿಸಿದ್ ಸಭಾಧ್ಯಕ್ಷ&ಸಭಾಪತಿ

Spread the love

ಬೆಳಗಾವಿ/ಬೆಂಗಳೂರು: ವಿಧಾನಮಂಡಲದ ಚಳಿಗಾಲ ಅಧಿವೇಶನ ಕುಂದಾನಗರಿ ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರದಿಂದ ಆರಂಭವಾಗಲಿದ್ದು, ಅಧಿವೇಶನ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಸಿದ್ಧತೆಗಳನ್ನು ವಿಧಾನಸಭಾಧ್ಯಕ್ಷ ಯು ಟಿ ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪರಿಶೀಲನೆ ನಡೆಸಿದರು.

ಸುವರ್ಣಸೌಧದಲ್ಲಿ ಕೈಗೊಂಡಿರುವ ಸಿದ್ಧತೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಅಗತ್ಯ ಸಲಹೆ ಸೂಚನೆಗಳನ್ನು ಅಧಿಕಾರಿಗಳಿಗೆ ಈ ಸಂದರ್ಭದಲ್ಲಿ ನೀಡಿದರು.

ಸುವರ್ಣಸೌಧದ ಪ್ರವೇಶದ್ವಾರಗಳಲ್ಲಿನ ಸಿದ್ಧತೆ, ವಿಧಾನಸಭಾ ಸದನ, ವಿಧಾನ ಪರಿಷತ್ ಸದನಗಳನ್ನು ವೀಕ್ಷಿಸಿದ ಅವರು ಮೈಕ್ ವ್ಯವಸ್ಥೆ ಸೇರಿ ಇನ್ನಿತರ ಅಂಶಗಳನ್ನು ಪರಿಶೀಲಿಸಿದರು. ಆಡಳಿತ ಪಕ್ಷದ ಮೊಗಸಾಲೆ, ವಿರೋಧ ಪಕ್ಷದ ಮೊಗಸಾಲೆ, ಸಭಾಧ್ಯಕ್ಷರ, ಸಭಾಪತಿಗಳ ಕೊಠಡಿ, ಮುಖ್ಯಮಂತ್ರಿಗಳ ಕೊಠಡಿ, ವಿರೋಧಪಕ್ಷದ ನಾಯಕರ ಕೊಠಡಿಯನ್ನು ಪರಿಶೀಲಿಸಿದರು. ಅಧಿವೇಶನ ಕರ್ತವ್ಯಕ್ಕೆ ಹಾಜರಾಗಿರುವ ಮಾರ್ಷಲ್​ಗಳ ಕ್ಷೇಮ ವಿಚಾರಿಸಿದ ಸಭಾಧ್ಯಕ್ಷ ಯು.ಟಿ. ಖಾದರ್ ಹಾಗೂ ಸಭಾಪತಿ ಬಸವರಾಜ ಹೊರಟ್ಟಿ ಅವರು, ಎಲ್ಲಿ ತಂಗಿದ್ದೀರಿ, ಊಟ ಸರಿಯಾಗಿತ್ತೇ, ಏನಾದ್ರೂ ಸಮಸ್ಯೆ ಇದರೆ ಹೇಳಿ ಸರಿಪಡಿಸಲಾಗುವುದು ಎಂದು ತಿಳಿಸಿ, ತಮಗೆ ವಹಿಸಿದ ಕೆಲಸ ಅಚ್ಚುಕಟ್ಟಾಗಿ ಮಾಡಿ ಎಂದು ಸೂಚನೆ ನೀಡಿದರು.

ಶಾಸಕರಿಗೆ, ಮಾರ್ಷಲ್​ಗಳಿಗೆ, ಅಧಿಕಾರಿಗಳಿಗೆ ಮತ್ತು ಮಾಧ್ಯಮದವರಿಗೆ ಕಲ್ಪಿಸಲಾಗಿರುವ ಊಟದ ಸಿದ್ಧತೆ ಪರಿಶೀಲಿಸಿದ ಸಭಾಧ್ಯಕ್ಷರು ಮತ್ತು ಸಭಾಪತಿಗಳು ಕೆಲ ಸಲಹೆಗಳನ್ನು ಸ್ಥಳದಲ್ಲಿದ್ದ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಅವರಿಗೆ ನೀಡಿದರು. ನಂತರ ಪ್ರೇಕ್ಷಕರ ಗ್ಯಾಲರಿ, ವಿದ್ಯಾರ್ಥಿಗಳು ಕಲಾಪ ವೀಕ್ಷಿಸುವ ಮುಂಚೆ ಸಂವಿಧಾನದ ಮೌಲ್ಯಗಳು, ವಿಧಾನಮಂಡಲದ ಕಲಾಪಗಳ ಕುರಿತ ಸಾಕ್ಷ್ಯಚಿತ್ರ ಬಿತ್ತರಿಸುವ ಸಭಾಂಗಣದ ಸಿದ್ಧತೆಗಳನ್ನು ಪರಿಶೀಲಿಸಿದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ