Breaking News
Home / ರಾಜಕೀಯ / ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಫುಲ್ ಖುಷ್ ಮೂರು ರಾಜ್ಯಗಳಿಗೆ ಬಿಜೆಪಿಯೇ ಬಾಸ್

ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಫುಲ್ ಖುಷ್ ಮೂರು ರಾಜ್ಯಗಳಿಗೆ ಬಿಜೆಪಿಯೇ ಬಾಸ್

Spread the love

ಪ್ರಚಂಡ ವಿಜಯಕ್ಕೆ ಕಾರಣೀಕರ್ತರಾದ ಮತದಾರ ಪ್ರಭುಗಳು ಹಾಗೂ ಕಾರ್ಯಕರ್ತರಿಗೆ ಅಭಿನಂಧನೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಡ್ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿ ಐತಿಹಾಸಿಕ ಜಯ ಸಾಧಿಸಿರುವುದಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಇನ್ನೇನೂ ಲೋಕಸಭೆಯ ಚುನಾವಣೆಯ ಹೊಸ್ತಿನಲ್ಲಿರುವಾಗ ಈ ರಾಜ್ಯಗಳ ಫಲಿತಾಂಶಗಳು ನಮ್ಮ ಕಾರ್ಯಕರ್ತರನ್ನು ಹುರಿದುಂಬಿಸಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪ್ರಿಯ ಕೇಂದ್ರ ಸರ್ಕಾರದ ಯೋಜನೆಗಳಿಂದ ಮತದಾರರು ಬಿಜೆಪಿಗೆ ಫುಲ್ ಮಾರ್ಕ್ಸ್ ನೀಡಿದ್ದಾರೆ. ಅದಕ್ಕಾಗಿ ಮೂರೂ ರಾಜ್ಯಗಳ ಮತದಾರರು, ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಬರುವ ೨೦೨೪ ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ ಬಿಜೆಪಿಗೆ ಸ್ಪಷ್ಟ ಬಹುಮತ ನೀಡುವ ಮೂಲಕ ಮೋದಿಯವರನ್ನು ಮತ್ತೊಂದು ಅವಧಿಗೆ ಪ್ರಧಾನಿಯನ್ನಾಗಿ ಕಣ್ತುಂಬಿ ನೋಡುವ ಅವಕಾಶವು ಪ್ರತಿಯೊಬ್ಬ ಭಾರತೀಯನಿಗೆ ಲಭಿಸಲಿದೆ. ಈ ಮೂಲಕ ದೇಶದಲ್ಲಿ ಬಿಜೆಪಿಯ ಹವಾ ಮುಂದುವರೆಯಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ