Breaking News

ತೆಲಂಗಾಣದಲ್ಲಿ ಬಿಆರ್​ಎಸ್​ ಭ್ರಷ್ಟಾಚಾರದ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ: ಪ್ರಿಯಾಂಕ್ ಖರ್ಗೆ

Spread the love

ಕಲಬುರಗಿ: ತೆಲಂಗಾಣದಲ್ಲಿ ಬಿಎಸ್​ಆರ್​ ಸರ್ಕಾರ ನಡೆಸಿರುವ ಭ್ರಷ್ಟಾಚಾರದ ವಿರುದ್ಧ ಜನರ ಆಕ್ರೋಶ ವ್ಯಕ್ತವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತ‌ನಾಡಿದ ಅವರು, “ನಾನು ಖುದ್ದಾಗಿ ತೆಲಂಗಾಣಕ್ಕೆ ಭೇಟಿ ನೀಡಿದ್ದೇನೆ. 10 ವರ್ಷದ ಕೆಸಿಆರ್ ಆಡಳಿತದಲ್ಲಿ 10 ಸ್ಕ್ಯಾಮ್ ಗಳಲ್ಲಿ 10 ಲಕ್ಷ ಕೋಟಿ ಭ್ರಷ್ಟಾಚಾರ ನಡೆದಿದೆ. ಕಾಳೇಶ್ವರಂ ನೀರಾವರಿ ಯೋಜನೆಯೊಂದರಲ್ಲೇ 1.50 ಲಕ್ಷ ಕೋಟಿ ಅವ್ಯವಹಾರ ಆಗಿರುವ ಬಗ್ಗೆ ಅಲ್ಲಿನ ಜನರೇ ಮಾತ‌ನಾಡಿಕೊಳ್ಳುತ್ತಿದ್ದರು. ಮನಗಂಡ ಜನರು ತೆಲಂಗಾಣ ಉಳಿಯಬೇಕಾದರೆ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ ಎಂದು ನಮಗೆ ಆಶೀರ್ವಾದ ಮಾಡಿದ್ದಾರೆ ” ಎಂದರು.

“ಕರ್ನಾಟಕದಲ್ಲಿ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳು ಕೂಡಾ ತೆಲಂಗಾಣದಲ್ಲಿ ಪ್ರಭಾವ ಬೀರಿವೆ. ಜನರ ಪರವಾದ, ಅಭಿವೃದ್ಧಿ ಪರವಾದ ಹಾಗೂ ಆರ್ಥಿಕ ಸ್ಥಿರತೆ ನಿರ್ಮಾಣ ಮಾಡುವ ಯೋಜನೆಗಳನ್ನು ಇಟ್ಟುಕೊಂಡೇ ನಾವು ಛತ್ತೀಸ್​ಗಢ, ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಪ್ರಣಾಳಿಕೆ ತಯಾರು ಮಾಡಿದ್ದೆವು. ಬಿಜೆಪಿ ಪ್ರಣಾಳಿಕೆಯಲ್ಲಿ ಜನಪರ ಹಾಗೂ ಆರ್ಥಿಕ‌ ಸಬಲತೆ ಮೂಡಿಸುವ ಕಾರ್ಯಕ್ರಮಗಳು ಇಲ್ಲ” ಎಂದು ಹೇಳಿದ್ದಾರೆ.

ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಪಕ್ಷ ಹಿನ್ನೆಡೆ ಅನುಭವಿಸಿದ ಬಗ್ಗೆ ಮಾತನಾಡಿ, “ನಾಲ್ಕು ರಾಜ್ಯಗಳ ಈ ಚುನಾವಣಾ ಫಲಿತಾಂಶ ಲೋಕಸಭೆಯ ಚುನಾವಣೆಯ ಮೇಲೆ ಪರಿಣಾಮ ಬೀರದು. ಲೋಕಸಭೆ ಚುನಾವಣೆಯಲ್ಲಿಯೂ ಕೂಡಾ ಆರ್ಥಿಕ‌ ಸ್ಥಿರತೆ ಹಾಗೂ ಜನಸಾಮಾನ್ಯರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು‌ ಚುನಾವಣೆ ಎದುರಿಸುತ್ತೇವೆ” ಎಂದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ