Breaking News

ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Spread the love

ಬೆಂಗಳೂರು : ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

 

ನಗರದಲ್ಲಿಂದು ಮಾಧ್ಯಮಗಳೊಂದಿಗೆ ನಾಲ್ಕು ರಾಜ್ಯಗಳ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್​ಗಡ್​ದಲ್ಲಿ ಹಿನ್ನಡೆ ಆಗಿದೆ. ತೆಲಂಗಾಣ ನಮ್ಮ ನೆರೆಯ ರಾಜ್ಯವಾಗಿರುವ ಕಾರಣ ಅಲ್ಲಿನ ಗೆಲುವಿನಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ಶ್ರಮದ ದೊಡ್ಡ ಪಾತ್ರ ಇದೆ ಎಂದರು.

ವರ್ಷದ ಹಿಂದೆ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎನ್ನುವುದನ್ನು ಯಾರೂ ನಿರೀಕ್ಷಿಸಿರಲಿಲ್ಲ. ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಕಾರ್ಯಕ್ರಮ ಅಲ್ಲಿನ ಪಕ್ಷದ ಕಾರ್ಯಕರ್ತರನ್ನು ಇನ್ನಷ್ಟು ಹುರಿದುಂಬಿಸಿದ್ದು ನಿಜ. ಅದರ ನಂತರ ಬಹಳ ವ್ಯವಸ್ಥಿತವಾದ ಪ್ರಚಾರ ನಡೆಯಿತು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಮತ್ತು ನುಡಿದಂತೆ ನಡೆದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ತೆಲಂಗಾಣದ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಡುವಂತಾಯಿತು ಎಂದು ಸಿಎಂ ತಿಳಿಸಿದ್ದಾರೆ.

ಬಿಜೆಪಿ, ಬಿಆರ್​ಎಸ್ ಪಕ್ಷದ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದು, ಮತದಾರರು ಎರಡು ಪಕ್ಷಗಳ ಮೇಲೆ ಭರವಸೆ ಕಳೆದುಕೊಳ್ಳುವಂತೆ ಮಾಡಿತು. ಈ ಒಳ ಒಪ್ಪಂದದ ತಂತ್ರಗಾರಿಕೆಯನ್ನು ಕಾಂಗ್ರೆಸ್ ಪಕ್ಷ ಪ್ರಚಾರದ ಸಮಯದಲ್ಲಿ ಬಯಲು ಮಾಡಿದ್ದು‌ ಕೂಡಾ ನಮ್ಮ ಗೆಲುವಿಗೆ ಕಾರಣ. ಉಳಿದ ಮೂರು ರಾಜ್ಯಗಳಲ್ಲಿ ಬಿಜೆಪಿಯ ಗೆಲುವಿನಲ್ಲಿ ಹಣ ಮತ್ತು ಕೋಮುವಾದಿ ರಾಜಕಾರಣದ ಪಾತ್ರ ಕೂಡಾ ಇದೆ. ಈ ಮೂರೂ ರಾಜ್ಯಗಳಲ್ಲಿ ಬಿಜೆಪಿ ಅಕ್ರಮ ಗಳಿಕೆಯನ್ನು ನೀರಿನಂತೆ ಚೆಲ್ಲಿದೆ. ಅದರ ಜೊತೆ ಧರ್ಮದ ಆಧಾರದಲ್ಲಿ ಸಮಾಜವನ್ನು ಒಡೆಯುವ ತಮ್ಮ ಹಳೆಯ ಆಟವನ್ನು‌ ಮುಂದುವರಿಸಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ