ಬೆಂಗಳೂರು: ತುಮಕೂರಿನ ಶಿರಾ ಹಾಗೂ ಬೆಂಗಳೂರಿನ ಆರ್ ಆರ್ ನಗರ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು, ಅಭ್ಯರ್ಥಿಗಳ ಎದೆಯಲ್ಲಿ ಢವಢವ ಆರಂಭವಾಗಿದೆ.
ಆರ್‍ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಗೆಲುವಿನ ವಿಶ್ವಾಸದಲ್ಲಿದ್ದಾರೆ. ಕೌಂಟಿಂಗ್ ಆರಂಭದ ಬಳಿಕ ಮತ ಎಣಿಕಾ ಕೇಂದ್ರದ ಕಡೆ ಹೋಗಲು ನಿರ್ಧಾರ ಮಾಡಿದ್ದಾರೆ. ಸದ್ಯ ಟಿವಿಯಲ್ಲಿಯೇ ಬೆಳವಣಿಗೆಗಳನ್ನು ವೀಕ್ಷಿಸ್ತಿರೊ ಮುನಿರತ್ನ ಅವರು, ಚುನಾವಣಾ ಫಲಿತಾಂಶಕ್ಕೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ನಿನ್ನೆ ಆಗಮಿಸಿದ್ದಾರೆ.ಇತ್ತ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ಕುಟುಂಬಸ್ಥರ ಜೊತೆ ಶೇಷಾದ್ರಿಪುರಂನಲ್ಲಿರೋ ಶ್ರೀ ಸುಬ್ರಮಣ್ಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಅಲ್ಲದೆ ವಿಜಯನಗರದ ಆದಿಚುಂಚನಗಿರಿ ಮಠದ ಶಿವ ದೇವಾಲಯ ಹಾಗೂ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.
Laxmi News 24×7