Breaking News

ಗಸ್ತು ಅರಣ್ಯ ಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ: ಅರ್ಹತೆ, ಅರ್ಜಿ ಸಲ್ಲಿಕೆ, ವೇತನದ ವಿವರ

Spread the love

ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಒಟ್ಟು 540 ಅರಣ್ಯ ಪಾಲಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಇವು ಗ್ರೂಪ್​ ಸಿ ಹುದ್ದೆಗಳಾಗಿವೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

 ಅಧಿಸೂಚನೆಹುದ್ದೆಗಳು- ಎಲ್ಲಿ, ಎಷ್ಟು?:

  • ಬೆಂಗಳೂರು 49
  • ಬೆಳಗಾವಿ 12
  • ಬಳ್ಳಾರಿ 29
  • ಚಾಮರಾಜನಗರ 83
  • ಚಿಕ್ಕಮಗಳೂರು 52
  • ಧಾರವಾಡ 5
  • ಹಾಸನ 18
  • ಕಲಬುರಗಿ 58
  • ಕೆನಾರ 33
  • ಕೊಡಗು 26
  • ಮಂಗಳೂರು 62
  • ಮೈಸೂರು 47
  • ಶಿವಮೊಗ್ಗ 66

ವಿದ್ಯಾರ್ಹತೆ: ಅಧಿಕೃತ ಮಂಡಳಿಗಳಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ: ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ.

ವೇತನ: ಮಾಸಿಕ 23,500-47,650 ರೂಪಾಯಿ.

ಅರ್ಜಿ ಸಲ್ಲಿಕೆ, ಅರ್ಜಿ ಶುಲ್ಕ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕಿದೆ. ಅರ್ಜಿ ಶುಲ್ಕವನ್ನು ಆನ್​ಲೈನ್​ ಮೂಲಕವೇ ಪಾವತಿಸಬೇಕು.

  • ಪ.ಜಾ, ಪ. ಪಂ ಮತ್ತು ಪ್ರವರ್ಗ 1 ಪುರುಷ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 120 ರೂ.
  • ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 70 ರೂ.
  • ಪ್ರವರ್ಗ 2ಎ, 2ಬಿ, 3ಎ, 3ಬಿ ಪುರುಷ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 220 ರೂ.
  • ಪ್ರವರ್ಗ 2ಎ, 2ಬಿ, 3ಎ, 3ಬಿ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 120 ರೂ.

ಆಯ್ಕೆ ಪ್ರಕ್ರಿಯೆ: ಮೆರಿಟ್​ ಪಟ್ಟಿ, ದಾಖಲಾತಿ ಪರೀಕ್ಷೆ, ದೈಹಿಕ ಗುಣಮಟ್ಟ, ದೈಹಿಕ ಸಾಮರ್ಥ್ಯ, ಶ್ರವಣ ಹಾಗು ದೃಷ್ಟಿ ಪರೀಕ್ಷೆಯ ಮೂಲಕ ಆಯ್ಕೆ.

ಡಿಸೆಂಬರ್​ 1ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಡಿಸೆಂಬರ್​ 30. ಶುಲ್ಕ ಪಾವತಿಗೆ ಕಡೆಯ ದಿನಾಂಕ ಜನವರಿ 5. ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ, ಅರ್ಜಿ ಸಲ್ಲಿಕೆಗೆ ಅಭ್ಯರ್ಥಿಗಳು kfdrecruitment.in ಇಲ್ಲಿಗೆ ಭೇಟಿ ನೀಡಿ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ