ತುಮಕೂರು: ಶಿರಾ ಉಪಚುನಾವಣೆಯ ಜಿದ್ದಾಜಿದ್ದಿನ ಅಖಾಡದ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಇತ್ತ ಅಭ್ಯರ್ಥಿಗಳ ಎದೆಯಲ್ಲಿ ಢವಢವ ಶುರುವಾಗಿದೆ. ಮೂರೂ ಪಕ್ಷಗಳ ಅಭ್ಯರ್ಥಿಗಳ ನಡುವೆ ತ್ರಿಕೋನ ಸ್ಪರ್ಧೆ ಇರೋಂದ್ರಿಂದ ಇಂದಿನ ಮತ ಎಣಿಕೆ ಇನ್ನಷ್ಟು ಮತ್ತಷ್ಟು ಕುತೂಹಲ ಕೆರಳಿಸಿದೆ.
ಕಾಂಗ್ರೆಸ್, ಜೆಡಿಎಸ್‍ಗೆ ಮತ್ತೆ ಅಸ್ತಿತ್ವ ಉಳಿಸಿಕೊಳ್ಳುವ ತವಕವಿದ್ದರೆ, ಬಿಜೆಪಿಗೆ ಖಾತೆ ತೆರೆಯುವ ತವಕ. ಶಿರಾ ಅಖಾಡದಲ್ಲಿ ಸೋಲು ಗೆಲುವಿನ ಲೆಕ್ಕಾಚಾರ. ಭಾರೀ ಕುತೂಹಲ ಮೂಡಿಸಿರೋ ಶಿರಾ ಉಪಚುನಾವಣೆ ಫಲಿತಾಂಶ ಇವತ್ತು ಪ್ರಕಟಗೊಳ್ಳಲಿದೆ. ನವೆಂಬರ್ 3ರಂದು ಮತದಾರರು ಬರೆದ ಭವಿಷ್ಯ ಇಂದು ಬಹಿರಂಗವಾಗಲಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಈ ಮೂರೂ ಪಕ್ಷದ ಅಭ್ಯರ್ಥಿಗಳ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದ್ದು ವಿಜಯದ ಕಿರೀಟ ಯಾರ ತಲೆಯೇರಲಿದೆ ಅನ್ನೋದು ಮಧ್ಯಾಹ್ನದೊಳಗೆ ತಿಳಿಯಲಿದೆ.
Laxmi News 24×7