Breaking News

ಬಿಎಂಟಿಸಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಕಾರು ಸುಟ್ಟು ಕರಕಲು

Spread the love

ಬೆಂಗಳೂರು: ವೇಗವಾಗಿ ಬಂದ ಕಾರು ಬಿಎಂಟಿಸಿ ಬಸ್‌ಗೆ ಡಿಕ್ಕಿಯಾಗಿ ಅಗ್ನಿಗಾಹುತಿಯಾದ ಘಟನೆ ಇಂದು ಬೆಳಿಗ್ಗೆ ನಾಗರಭಾವಿ ಹೊರವರ್ತುಲ ರಸ್ತೆಯ ಚಂದ್ರಾಲೇಔಟ್ ಬಸ್ ನಿಲ್ದಾಣದ ಬಳಿ ನಡೆಯಿತು.

ಯಶವಂತಪುರದಿಂದ ನಾಯಂಡಹಳ್ಳಿಗೆ ತೆರಳುತ್ತಿದ್ದ ಬಸ್​ ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಪ್ರಯಾಣಿಕರನ್ನು ಇಳಿಸಲು ಹಾಗೂ ಹತ್ತಿಸಿಕೊಳ್ಳಲು ಚಂದ್ರಾಲೇಔಟ್ ಬಸ್ ನಿಲ್ದಾಣದಲ್ಲಿ ನಿಲ್ಲಿಸಲಾಗಿತ್ತು. ಈ ಸಂದರ್ಭದಲ್ಲಿ ವೇಗವಾಗಿ ಬಂದ ಕಾರು ಹಿಂಬದಿಯಿಂದ ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಉಂಟಾದ ಘರ್ಷಣೆಯಿಂದ ಬೆಂಕಿ ಹತ್ತಿಕೊಂಡಿದ್ದು, ಕಾರು ಪೂರ್ತಿಯಾಗಿ ಅಗ್ನಿಗಾಹುತಿಯಾಯಿತು. ಬಸ್ಸಿನ ಹಿಂಬದಿ ಆಸನಗಳು ಸುಟ್ಟು ಕರಕಲಾಗಿವೆ. ಕಾರು ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love

About Laxminews 24x7

Check Also

ಬೆಳೆ ಹಾನಿ ಪರಿಹಾರದಿಂದ ವಂಚಿತರಾದ ಮರಕಟ್ಟೆ ರೈತರು; ಸರ್ಕಾರದ ವಿರುದ್ಧ ಆಕ್ರೋಶ.! ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ…

Spread the love ಬೆಳೆ ಹಾನಿ ಪರಿಹಾರದಿಂದ ವಂಚಿತರಾದ ಮರಕಟ್ಟೆ ರೈತರು; ಸರ್ಕಾರದ ವಿರುದ್ಧ ಆಕ್ರೋಶ.! ಜಿಲ್ಲಾಧಿಕಾರಿ ಕಛೇರಿ ಮುಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ