Breaking News

ವಿಧಾನಸಭೆ ಕಲಾಪದಲ್ಲಿ 18 ಮಸೂದೆಗಳ ಮಂಡನೆಗೆ ಕಲಾಪ ಸಲಹಾ ಸಮಿತಿ ಸಭೆ

Spread the love

ಬೆಳಗಾವಿ/ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ 18 ಮಸೂದೆಗಳ ಮಂಡನೆಗೆ ಕಲಾಪ ಸಲಹಾ ಸಮಿತಿ ಸಭೆ (ಬಿಎಸಿ)ಯಲ್ಲಿ ಚರ್ಚೆ ನಡೆಸಲಾಯಿತು.
ಸ್ಪೀಕರ್ ಯು ಟಿ ಖಾದರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 18 ಮಸೂದೆ ಮಂಡನೆ ಸಂಬಂಧ ಚರ್ಚೆ ನಡೆಸಲಾಯಿತು.

ಮುಂದಿನ ವಾರದಿಂದ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಅವಕಾಶ ನೀಡಲು ತೀರ್ಮಾನಿಸಲಾಯಿತು. ಮಧ್ಯಾಹ್ನದ ಬಳಿಕ ಕಂದಾಯ ಸಚಿವ ಕೃಷ್ಣ ಬೈರೇಗೌಡ ಬರ ನಿರ್ವಹಣೆ ಸಂಬಂಧ ಸದನಕ್ಕೆ ಮಾಹಿತಿ ನೀಡಲಿದ್ದಾರೆ. ಬಳಿಕ ಪ್ರತಿಪಕ್ಷಗಳು ಬರ ಸಂಬಂಧ ಚರ್ಚೆಗೆ ಕೋರಿ ಸಲ್ಲಿಸಿರುವ ನಿಲುವಳಿಗೆ ಅವಕಾಶ ನೀಡಲು ನಿರ್ಧರಿಸಲಾಯಿತು.

ಇದೇ ವೇಳೆ ಪ್ರತಿಪಕ್ಷಗಳು ಬೆಳಗಾವಿ ಅಧಿವೇಶನವನ್ನು ಒಂದು ವಾರ ಕಾಲ ವಿಸ್ತರಿಸುವಂತೆ ಕೋರಿದರು. ಈ ಬಗ್ಗೆ ಮುಂದಿನ‌ ಬಿಎಸಿ ಸಭೆಯಲ್ಲಿ ಚರ್ಚೆ ನಡೆಸಲು ತೀರ್ಮಾನಿಸಲಾಯಿತು.

ಯಾವೆಲ್ಲಾ ಬಿಲ್​ಗಳ ಮಂಡನೆ ಸಾಧ್ಯತೆ?: ಕರ್ನಾಟಕ ಕರಾವಳಿ ಅಭಿವೃದ್ಧಿ ನಿಗಮ ತಿದ್ದುಪಡಿ ವಿಧೇಯಕ 2021, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ 2023, ವೈದ್ಯಕೀಯ ಪದವೀಧರ ಕಡ್ಡಾಯ ಗ್ರಾಮೀಣ ಸೇವೆ ತಿದ್ದುಪಡಿ ವಿಧೇಯಕ, ಕರ್ನಾಟಕ ಸರಕು ಮತ್ತು ಸೇವೆಗಳ ತಿದ್ದುಪಡಿ ವಿಧೇಯಕ, ಕರ್ನಾಟಕ ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ, ಗದಗ ಬೆಟಗೇರಿ ವ್ಯಾಪಾರ ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ವಿಧೇಯಕ, ಕರ್ನಾಟಕ ಪರಿಶಿಷ್ಟ ಜಾತಿ ಪಂಗಡಗಳ ಉಪ ಮಂಜೂರತಿ ಮಸೂದೆ, ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಬಿಲ್, ಶ್ರೀ ರೇಣುಕಾ ಎಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ರಚನೆ ವಿಧೇಯಕಗಳು ಇವೆ.

ಇನ್ನು ಕರ್ನಾಟಕ ಅಭಿವೃದ್ಧಿ ಮಂಡಳಿ ಮೈಸೂರು ನಗರ ಅಭಿವೃದ್ಧಿ ವಿಧೇಯಕ, ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣೆ ಪ್ರಾಧಿಕಾರ ರಚನೆ ವಿಧೇಯಕ,
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ವಿಧೇಯಕ, ಕರ್ನಾಟಕ ಸ್ಟಾಂಪ್ ತಿದ್ದುಪಡಿ ವಿಧೇಯಕ, ಕರ್ನಾಟಕ ನಗರ ಮತ್ತು ಯೋಜನೆ ತಿದ್ದುಪಡಿ ವಿಧೇಯಕ, ಕರ್ನಾಟಕ ಸಿವಿಲ್ ಕೋರ್ಟ್ ತಿದ್ದುಪಡಿ ವಿಧೇಯಕ, ಕರ್ನಾಟಕ ಹೈಕೋರ್ಟ್ ತಿದ್ದುಪಡಿ ವಿಧೇಯಕ, ಕರ್ನಾಟಕ ವೃತ್ತಿ ಪರ ಸಿವಿಲ್ ಇಂಜಿನಿಯರ್​ಗಳ ಪರಿಷತ್ ಮಸೂದೆ, ಕರ್ನಾಟಕ ಆಡಳಿತಾತ್ಮಕ ಕಾರ್ಯ ವಿಧಾನ ಮಸೂದೆ ಮಂಡೆನೆಯಾಗುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ