Breaking News
Home / ಜಿಲ್ಲೆ / ಬೆಳಗಾವಿ / ರಮೇಶ್​ ಜಾರಕಿಹೊಳಿ ಆಪ್ತನ ಮೇಲೆ ಹಲ್ಲೆ , ಚನ್ನರಾಜ ಹಟ್ಟಿಹೋಳಿ ಹಾಗೂ ಬೆಂಬಲಿಗರೇ ಈ ಘಟನೆಗೆ ಕಾರಣ ಎಂದು ಹಲ್ಲೆಗೊಳಗಾದ ಪೃಥ್ವಿ ಸಿಂಗ್ ಪ್ರಕರಣ ದಾಖಲ

ರಮೇಶ್​ ಜಾರಕಿಹೊಳಿ ಆಪ್ತನ ಮೇಲೆ ಹಲ್ಲೆ , ಚನ್ನರಾಜ ಹಟ್ಟಿಹೋಳಿ ಹಾಗೂ ಬೆಂಬಲಿಗರೇ ಈ ಘಟನೆಗೆ ಕಾರಣ ಎಂದು ಹಲ್ಲೆಗೊಳಗಾದ ಪೃಥ್ವಿ ಸಿಂಗ್ ಪ್ರಕರಣ ದಾಖಲ

Spread the love

ಬೆಳಗಾವಿ : ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಆಪ್ತ ಹಾಗೂ ಬಿಜೆಪಿ ಮುಖಂಡನ ಮೇಲೆ ಕೆಲವರು ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ.

ಸೋಮವಾರ ಸಂಜೆ ಜಯನಗರದ ಪೃಥ್ವಿ ಸಿಂಗ್ ಅವರ ಮನೆ ಮುಂದೆ ಐದಾರು ಜನರು ಏಕಾಏಕಿ ಬಂದು, ಹೊರಗೆ ಕರೆದೊಯ್ದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಪೃಥ್ವಿ ಸಿಂಗ್ ಅವರು ಕೆಲವರ ಜೊತೆಗೆ ಮಾತನಾಡುತ್ತಿರುವುದು ಅವರ ಮನೆ ಬಳಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗಾಯಗೊಂಡ ತಕ್ಷಣ ಪೃಥ್ವಿ ಸಿಂಗ್ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂಎಲ್​ಸಿ ಚನ್ನರಾಜ ಹಟ್ಟಿಹೋಳಿ ಹಾಗೂ ಬೆಂಬಲಿಗರೇ ಈ ಘಟನೆಗೆ ಕಾರಣ ಎಂದು ಹಲ್ಲೆಗೊಳಗಾದ ಪೃಥ್ವಿ ಸಿಂಗ್ ಹಾಗೂ ಅವರ ಮಗ ಜಸ್ವೀರ್ ಸಿಂಗ್ ಆರೋಪ ಮಾಡಿದ್ದಾರೆ.

ತನಿಖೆ ಆಗಲಿ ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ : ಹಲ್ಲೆ ಆರೋಪ ರಾಜಕೀಯ ಪ್ರೇರಿತವೋ, ಷಡ್ಯಂತ್ರವೋ ಅಂತ ಕೂಲಂಕಷವಾಗಿ ತನಿಖೆ ಆಗಲಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬಿಜೆಪಿ ಮುಖಂಡನ ಮೇಲೆ ಚಾಕು ಇರಿತ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಅವರು, ಏನಾಗಿದೆ ಅಂತ ನನಗೆ ಗೊತ್ತಿಲ್ಲ. ಈಗಷ್ಟೇ ಎಸ್​ಪಿ ಅವರು ನನ್ನ ಗಮನಕ್ಕೆ ತಂದರು. ನಾನು ತಕ್ಷಣ ನನ್ನ ತಮ್ಮನಿಗೆ ಫೋನ್ ಮಾಡಿದೆ. ಹಾಗೇನಾದರೂ ಇದ್ದರೆ ಅವರು ಪೊಲೀಸ್ ದೂರು ಕೊಡಲಿ ಎಂದರು.

ನಾನು ಆ ಹುಡುಗನ ಹೆಸರನ್ನು‌ ಹೇಳಲು ಇಷ್ಟಪಡಲ್ಲ. ಆತ ಬೋಗಸ್, ಇದರ ಹಿಂದೆ ಯಾರಿದ್ದಾರೆ ಅಂತನೂ ಗೊತ್ತಾಗಬೇಕು. ಆತನ (ಪೃಥ್ವಿ ಸಿಂಗ್) ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡವರಿದ್ದಾರೆ. ಈಗ ನಮ್ಮ ಮೇಲೆ ಆರೋಪ ಬಂದಿದೆ. ಆ ತರ ಇದ್ದರೆ ದೂರು ಕೊಡಲಿ, 24 ಗಂಟೆ ಒಳಗೆ ಪೊಲೀಸರು ವರದಿ ಕೊಡಲಿ ಎಂದು ಸಚಿವರು ಹೇಳಿದರು. ಸೂಕ್ತ ತನಿಖೆ ಮಾಡಿ ಅಂತ ನಾನು ಎಸ್‌ಪಿಯವರಿಗೆ ಹೇಳಿದ್ದೇನೆ. ತನಿಖೆ ಆಗಲಿ, ಸತ್ಯಾಸತ್ಯತೆ ಗೊತ್ತಾಗಲಿ. ಇದು ರಾಜಕೀಯ ಪ್ರೇರಿತ ಆರೋಪ. ನಾವು ಶಾಂತಿಪ್ರಿಯರು ಎಂದು ತಿಳಿಸಿದರು.

ಎಪಿಎಂಸಿ ಪೊಲೀಸ್ ಠಾಣೆಗೆ ದೂರು: ಆಸ್ಪತ್ರೆಗೆ ಮಾಜಿ ಶಾಸಕರಾದ ಸಂಜಯ ಪಾಟೀಲ, ಅನಿಲ ಬೆನಕೆ, ಮಾಜಿ ಎಂಎಲ್ಸಿ ಮಹಾಂತೇಶ ಕವಟಗಿಮಠ, ಎಂ.ಬಿ ಜೀರಲಿ ಸೇರಿ ಮತ್ತಿತರರು ಭೇಟಿ ನೀಡಿ ಪೃಥ್ವಿ ಸಿಂಗ್ ಆರೋಗ್ಯ ವಿಚಾರಿಸಿದರು. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ