Breaking News

ಕಾಡಾನೆ ದಾಳಿಗೆ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಬಲಿ

Spread the love

ಹಾಸನ : ಕಾಡಾನೆ ದಾಳಿಗೆ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಬಲಿಯಾಗಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಾಳೆಕೆರೆ ಅರಣ್ಯ ಪ್ರದೇಶದಲ್ಲಿ ಇಂದು ನಡೆದಿದೆ.

ಅರ್ಜುನ ಸೇರಿ ನಾಲ್ಕು ಪಳಗಿದ ಆನೆಗಳೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸುವ ವೇಳೆ ಘಟನೆ ಸಂಭವಿಸಿದೆ.

 ಅಂಬಾರಿ ಹೊತ್ತು ಗಾಂಭೀರ್ಯದ ನಡೆಯೊಂದಿಗೆ ಅರ್ಜುನಅರಣ್ಯ ಇಲಾಖೆ ಸಿಬ್ಬಂದಿ ಪುಂಡಾನೆಗೆ ಅರವಳಿಕೆ ಚುಚ್ಚು ಮದ್ದು ನೀಡುವಾಗ ಆ ಆನೆ ಅರ್ಜುನನ ಮೇಲೆ ದಾಳಿ ನಡೆಸಿದೆ. ಒಂಟಿ ಸಲಗದ ಜೊತೆ ಕಾಳಗಕ್ಕಿಳಿದ ಅರ್ಜುನ ಹೋರಾಟ ನಡೆಸುತ್ತಿದ್ದಂತೆ, ಅರ್ಜುನನ ಮೇಲಿನಿಂದ ಮಾವುತರು ಕೆಳಗಿಳಿದಿದ್ದಾರೆ. ಬಳಿಕ ಕಾಳಗದಲ್ಲಿ ಹೋರಾಡುವಾಗ ಹೊಟ್ಟೆ ಭಾಗಕ್ಕೆ ಒಂಟಿ ಸಲಗ ತಿವಿದಿದ್ದರಿಂದಾಗಿ ಅರ್ಜುನ ಮೃತಪಟ್ಟಿದೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ