ಸೋಮವಾರ (ಡಿ.04) ರಂದು ಮುಖ್ಯಮಂತ್ರಿಗಳು ಆಡಿದ ಮಾತು ದೇಶ ಮತ್ತು ರಾಜ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಹಿಂದೆ ಟಿಪ್ಪು (Tippu) ಮೇಲೆ ಅತಿಯಾದ ಪ್ರೀತಿ ತೋರಿಸಿ ಏನಾಯಿತು? ಹಿಂದೂಗಳನ್ನು ಎರಡನೇ ದರ್ಜೆ ಪ್ರಜೆಗಳ ರೀತಿ ನೋಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ವಾಗ್ದಾಳಿ ಮಾಡಿದರು.
ಸುವರ್ಣಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಸಮಾನತೆ ಇರಬೇಕು. ಟಿಪ್ಪು ಜಯಂತಿ, ಶಾಯಿ ಭಾಗ್ಯ, ಮುಸ್ಲಿಂ ವಿವಾಹಕ್ಕೆ ಧನ ಸಹಾಯ ಈ ರೀತಿ ಕಾರ್ಯಕ್ರಮಗಳನ್ನ ತಂದರು. ಮುಸ್ಲಿಮರನ್ನು ವೋಟ್ ಗಾಳವಾಗಿ ಕಾಂಗ್ರೆಸ್ ಬಳಕೆ ಮಾಡಿಕೊಳ್ಳುತ್ತಿದೆ ಎಂದರು.
ಅಲ್ಪಸಂಖ್ಯಾತರು, ಬಹುಸಂಖ್ಯಾತರು ಅನ್ನೋದನ್ನು ಬಿಡಬೇಕು
ದೊಡ್ಡ ಕೋಮುವಾದಿ ಅಂದರೇ ಕಾಂಗ್ರೆಸ್ನವರು. ಸಿದ್ದರಾಮಯ್ಯ ದೊಡ್ಡ ಕೋಮುವಾದಿ. ಸುಖದಲ್ಲಿ ತೇಲುತ್ತಿರುವ ವ್ಯಕ್ತಿ ಅಂದರೆ ಅದು ಸಿದ್ದರಾಮಯ್ಯ. ಮುಖ್ಯಮಂತ್ರಿಗಳು ಅಲ್ಪಸಂಖ್ಯಾತರು, ಬಹುಸಂಖ್ಯಾತರು ಅನ್ನೋದನ್ನು ಬಿಡಬೇಕು. ರಾಜಕೀಯ ಸಲುವಾಗಿ ಬರಿ ಮತಕ್ಕಾಗಿ ಪುಷ್ಠೀಕರಣ ನೀಡುತ್ತಿದ್ದಾರೆ. ಈ ರೀತಿಯ ವಿಶೇಷ ಹೇಳಿಕೆ ಅಷ್ಟು ಸೂಕ್ತವಲ್ಲ. ನಮ್ಮ ಸಮಾಜದಲ್ಲಿ ಸಮಸ್ಯೆಯಿಂದ ಕಾಡುತ್ತಿದ್ದರೆ ಅದು ಕಾಂಗ್ರೆಸ್ ಎಂದು ಎಂದು ಬಿಜೆಪಿ ಶಾಸಕ ಡಾ.ಅಶ್ವತ್ಥ್ ನಾರಾಯಣ ಎಂದು ಕಿಡಿಕಾರಿದರು.
ಸಿಎಂ ಸಿದ್ದರಾಮಯ್ಯನವರು ಒಳ್ಳೆಯ ಆಡಳಿತ ಕೊಟ್ಟು, ಭ್ರಷ್ಟಾಚಾರ ನಿರ್ಮೂಲನೆ ಮಾಡಿ ಜನಪರವಾಗಿ ಕೆಲಸ ಮಾಡಿದರೇ, ಎಲ್ಲಾ ಸಮುದಾಯಗಳಿಗೂ ಸಲ್ಲುವಂತಹದ್ದು ಆಗಲಿದೆ. ಗುಣಮಟ್ಟದ ಆರೋಗ್ಯ ಸೇವೆ ಕೊಡುತ್ತಿಲ್ಲ. ಜನರಿಗೆ ಸಮರ್ಪಕವಾಗಿ ವಿದ್ಯುತ್ ಕೊಡುತ್ತಿಲ್ಲ. ಬರ, ಆತ್ಮಹತ್ಯೆ ಮಾಡಿಕೊಳ್ಳುವವರಿಗೆ ಪರಿಹಾರ ಕೊಡುತ್ತಿಲ್ಲ. ನಿಮ್ಮ ಪಾದಾರ್ಪಣೆ ವೇಳೆ ಹಲವು ಸಮಸ್ಯೆಗಳು ತಲೆದೂರಿವೆ. ಕಿವಿಗೆ ಹೂವು ಇಡುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.
Laxmi News 24×7