ಕಲಬುರಗಿ : ಮಂಗಳವಾರ ಬೆಳಗ್ಗೆ ಲೋಕಾಯುಕ್ತ ಸಿಬ್ಬಂದಿ (Lokayukta) 13 ಮಂದಿ ಅಧಿಕಾರಿಗಳ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದ್ದು, ಅವರ ಪೈಕಿ ಬಿಜೆಪಿ (BJP) ರಾಜ್ಯಾಧ್ಯಕ್ಷ ವಿಜಯೇಂದ್ರ (B Y Vijayendra) ಅವರ ಪತ್ನಿಯ ಸೋದರ ಸಹ ಸೇರಿದ್ದಾರೆಂದು ತಿಳಿದುಬಂದಿದೆ.
ಕಲಬುರಗಿಯ (Kalaburagi) ಕರುಣೇಶ್ವರ ಕಾಲನಿಯಲ್ಲಿರುವ ಡಾ. ಪ್ರಭುಲಿಂಗ ಮಾನಕರ್ (Dr Prabhulinga Mankar) ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಯಾದಗಿರಿಯ ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಪ್ರಭುಲಿಂಗ ಮಾನಕರ್ ಅವರ ಮೇಲೆ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಡಿವೈಎಸ್‌ಪಿ ಹಣುಮಂತರಾಯ ನೇತೃತ್ವದಲ್ಲಿ ಹಾಗೂ ಕಲಬುರಗಿ ಲೋಕಾಯುಕ್ತ ಎಸ್‌ಪಿ ಎ.ಆರ್ ಕರ್ನುಲ್ ಅವರ ಮಾರ್ಗದರ್ಶನದಲ್ಲಿ ದಾಳಿ ನಡೆಸಲಾಗಿದೆ.
ಕಲಬುರಗಿಯ ಗೊಬ್ಬೂರು ಬಳಿಯ ಪ್ರಭುಲಿಂಗ ಫಾರ್ಮರ್ಸ್ ಮೇಲು ಕೂಡ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Laxmi News 24×7