ಹುಬ್ಬಳ್ಳಿಯ ಹಜರತ್ ಬಾದಶಾ ಪೀರ್ ದರ್ಗಾ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಭರವಸೆ ನೀಡಿದರು.
ಹುಬ್ಬಳ್ಳಿ: ಹುಬ್ಬಳ್ಳಿಯ ಹಜರತ್ ಬಾದಶಾ ಪೀರ್ ದರ್ಗಾ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಭರವಸೆ ನೀಡಿದರು.
ಹುಬ್ಬಳ್ಳಿಯ ಹಜರತ್ ಬಾದ್ ಶಾ ಪೀರಾನ್ ದರ್ಗಾದ ಆವರಣದಲ್ಲಿ ನಡೆದ ಬೃಹತ್ ಔಲಾದೇ ಗೌಸೆ ಅಜಮ್ (ಮೆಹಬೂಬೇ ಸುಭಾನೇ ಮಕ್ಕಳ ಸಮಾವೇಷ) ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ”ಸಮಾಜದಲ್ಲಿ ವೈವಿದ್ಯತೆ ಇದೆ.
ಸಹಿಷ್ಣುತೆ ಮತ್ತು ಸಹಬಾಳ್ವೆಯ ಸಂಸ್ಕಾರವನ್ನು ಪಾಲಿಸಿದರೆ, ಸಮಾಜದಲ್ಲಿ ಅಶಾಂತಿ ಮತ್ತು ಅಪನಂಬಿಕೆಯ ವಾತಾವರಣ ಇಲ್ಲವಾಗುತ್ತದೆ” ಎಂದು ಹೇಳಿದರು.