ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಬಿಜೆಪಿ ಶಾಸಕ ಕೋಟ ಶ್ರೀನಿವಾಸ ಪೂಜಾರಿ ಅವರು, ರೈತರ ನೆರವಿಗೆ ಕೂಡಲೇ 10 ಸಾವಿರ ಕೋಟಿ ಬರ ಪರಿಹಾರ ಪ್ಯಾಕೇಜ್ ಘೋಷಿಸಬೇಕು ಇಲ್ಲವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದಾರೆ. ಬೆಳಗಾವಿ: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಬಿಜೆಪಿ ಶಾಸಕ ಕೋಟ ಶ್ರೀನಿವಾಸ ಪೂಜಾರಿ ಅವರು, ರೈತರ ನೆರವಿಗೆ ಕೂಡಲೇ 10 ಸಾವಿರ ಕೋಟಿ ಬರ ಪರಿಹಾರ ಪ್ಯಾಕೇಜ್ ಘೋಷಿಸಬೇಕು ಇಲ್ಲವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದಾರೆ.
ಸೋಮವಾರ ವಿಧಾನ ಪರಿಷತ್ತಿನಲ್ಲಿ ರಾಜ್ಯದಲ್ಲಿನ ಬರಗಾಲದ ಕುರಿತ ಚರ್ಚೆ ವೇಳೆ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರ ಪರವಾಗಿ ಕೆಲಸ ಮಾಡುವ ಬದಲು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವಲ್ಲಿ ನಿರತವಾಗಿದೆ ಎಂದು ಕಿಡಿಕಾರಿದರು. ಅನುದಾನ ನೀಡುವುದು ಕೇಂದ್ರದ ಜವಾಬ್ದಾರಿ ಹೌದು, ಆದರೆ, ರಾಜ್ಯ ಸರ್ಕಾರ ಮೊದಲು ತನ್ನ ಪಾಲಿನ ಕೆಲಸವನ್ನು ಮಾಡಬೇಕು ಎಂದು ಹೇಳಿದರು.