Breaking News

ರಾಜ್ಯ ಸರ್ಕಾರ ಶೀಘ್ರವೇ ಮೀಸಲಾತಿ ಕೊಡುತ್ತದೆ ಎನ್ನುವ ಭರವಸೆ ಇದೆ.:ಬಸವಜಯ ಮೃತ್ಯುಂಜಯ ಶ್ರೀ

Spread the love

ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ ರಾಜ್ಯ ಸರ್ಕಾರ ಶೀಘ್ರವೇ ಮೀಸಲಾತಿ ಕೊಡುತ್ತದೆ ಎನ್ನುವ ಭರವಸೆ ಇದೆ. ಎಲ್ಲಾ ಪಕ್ಷಗಳಿಗೂ ಪಂಚಮಸಾಲಿ ಮತಗಳು ಬೇಕು. ಹೀಗಾಗಿ ಲೋಕಸಭೆ ಚುನಾವಣೆಯೊಳಗೆ ಮೀಸಲಾತಿ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಇಂದು ಬೆಳಗಾವಿಯ ಖಾಸಗಿ ಹೋಟೆಲ್​ನಲ್ಲಿ ಸರ್ವಪಕ್ಷಗಳ ಪಂಚಮಸಾಲಿ ಸಮಾಜದ ಹಾಲಿ ಹಾಗೂ ಮಾಜಿ ಶಾಸಕರ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಹೋರಾಟಕ್ಕೆ ಸರಿಯಾದ ನ್ಯಾಯ ಸಿಕ್ಕಿಲ್ಲ. ಸರ್ಕಾರ ರಚನೆಯಾದ ತಕ್ಷಣವೇ ನಮ್ಮ ಶಾಸಕರನ್ನು ಭೇಟಿಯಾಗಿ ಚರ್ಚಿಸಿದ್ದೆವು. ಸರ್ಕಾರ ಈಗಷ್ಟೇ ರಚನೆಯಾಗಿದ್ದರಿಂದ ಶಾಂತವಾಗಿ ಹೋರಾಟ ಮಾಡೋಣ ಎಂದು ನಿರ್ಧಾರ ಮಾಡಿದ್ದೆವು. ಇದೀಗ ನಮ್ಮ ಶಾಸಕರ ಅಭಿಪ್ರಾಯದ ಮೇರೆಗೆ ಅಧಿವೇಶನದಲ್ಲಿ ಹೋರಾಟಕ್ಕೆ ನಿರ್ಧರಿಸಿದ್ದೇವೆ ಎಂದರು.

ನಮ್ಮ ಸಮಾಜದ ಸಭೆಗೆ ಸಿಎಂ ಅವರನ್ನು ಆಹ್ವಾನಿಸುತ್ತೇವೆ. ಸಮಾಜಕ್ಕೆ 2ಎ ಮೀಸಲಾತಿ ಹಾಗೂ ಒಳಪಂಗಡಗಳನ್ನು ಒಬಿಸಿ ಪಟ್ಟಿಗೆ ಸೇರಿಸುವ ಕುರಿತು ಸಭೆ ಮಾಡಲಿದ್ದೇವೆ.‌ ಸಿಎಂ ಜತೆಗೆ ಸಭೆ ಮಾಡಿದ ನಂತರವೇ ನಮ್ಮ ನಿರ್ಧಾರ ಪ್ರಕಟಿಸುತ್ತೇವೆ. ಸಿಎಂ ಜತೆಗೆ ಸಭೆ ಮಾಡದೇ ಹೋರಾಟ ಮಾಡುವುದು ಸರಿಯಲ್ಲ ಎಂಬ ಸಲಹೆಗಳು ಬಂದಿವೆ. ನಾಳೆ ಅಥವಾ ನಾಡಿದ್ದು ಸಿಎಂ ನೇತೃತ್ವದಲ್ಲಿ ಸಭೆ ಮಾಡಿದ ನಂತರ ಮುಂದಿನ ಹೋರಾಟದ ಬಗ್ಗೆ ನಿರ್ಣಯಿಸುತ್ತೇವೆ. ಸರ್ಕಾರದ ಮೇಲೆ ನಂಬಿಕೆ ಇಟ್ಟಿದ್ದು, ಲೋಕಸಭೆ ಚುನಾವಣೆ ಒಳಗೆ ಮೀಸಲಾತಿ ಘೋಷಿಸಬೇಕು ಎಂದು ಸ್ವಾಮೀಜಿ ಒತ್ತಾಯಿಸಿದರು.


Spread the love

About Laxminews 24x7

Check Also

ಬಂಟ್ವಾಳ ರಹಿಮಾನ್ ಹತ್ಯೆ..ಮತ್ತೆ ಪ್ರತೀಕಾರದ ಪೋಸ್ಟರ್: ಮಂಗಳೂರಿನಲ್ಲಿ ಏನೇನಾಯ್ತು?

Spread the loveಮಂಗಳೂರು, (ಮೇ 29): ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಹತ್ಯೆಯಾಗಿ ತಿಂಗಳು ಕಳೆದಿಲ್ಲ. ಅಷ್ಟರಲ್ಲೇ ಕಡಲನಗರಿ ಮಂಗಳೂರಿನಲ್ಲಿ ಮತ್ತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ