Breaking News

ಕನಿಷ್ಠ ವೇತನಕ್ಕೆ ಆಗ್ರಹಿಸಿ ಜಾಡಮಾಲಿ‌ ನೌಕರರು ಪ್ರತಿಭಟನೆ

Spread the love

ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 977 ಜಾಡಮಾಲಿ ನೌಕರರಿಗೆ ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್​​ನಲ್ಲಿ ಇಂದು ನೌಕರರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು.

2017ಕ್ಕಿಂತ ಪೂರ್ವದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಾಡಮಾಲಿಗಳನ್ನು ಮರುನೇಮಕಗೊಳಿಸಿ ಕನಿಷ್ಠ ವೇತನ ನೀಡಬೇಕು. ಸರ್ಕಾರ ನೇರವಾಗಿ ವೇತನ ಪಾವತಿಸಬೇಕು. ನಮ್ಮನ್ನು ಡಿ ಗ್ರೂಪ್ ನೌಕರರೆಂದು ಪರಿಗಣಿಸಲು ಇರುವ ಕಾನೂನು ನ್ಯೂನತೆ ಸರಿಪಡಿಸಿ ವಿಶೇಷ ನಿಯಮದಡಿ ನೇಮಕವೆಂದು ಪರಿಗಣಿಸಬೇಕೆಂದು ಒತ್ತಾಯಿಸಿದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ