Breaking News

ಬಿಹಾರದಲ್ಲಿ ಮಹಾಮೈತ್ರಿಗೆ ಮುನ್ನಡೆ – ಎನ್‍ಡಿಎಗೆ ಹಿನ್ನಡೆ

Spread the love

ಪಾಟ್ನಾ: ಬಿಹಾರದಲ್ಲಿ ಮತ ಎಣಿಕೆ ಆರಂಭಗೊಂಡಿದ್ದು ಚುನಾವಣೋತ್ತರ ಸಮೀಕ್ಷೆಯಂತೆ ಮಹಾಮೈತ್ರಿ ಮುನ್ನಡೆಯಲ್ಲಿದೆ.

ಆರ್‌ಜೆಡಿ 61, ಬಿಜೆಪಿ 28, ಜೆಡಿಯು 23, ಕಾಂಗ್ರೆಸ್ 16, ಎಲ್‌ಜೆಪಿ 02, ಇತರರು 10 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ. 2015ರ ಚುನಾವಣೆಯಲ್ಲಿ ಆರ್‌ಜೆಡಿ 80, ಬಿಜೆಪಿ 53, ಜೆಡಿಯು 71, ಕಾಂಗ್ರೆಸ್ 27 ಎಲ್‍ಜೆಪಿ 2, ಇತರರು 10 ಸ್ಥಾನ ಗೆದ್ದಿದ್ದರು. ಒಟ್ಟು 243 ವಿಧಾನಸಭಾ ಕ್ಷೇತ್ರಗಳಿದ್ದು 123 ಮ್ಯಾಜಿಕ್ ಸಂಖ್ಯೆಯಾಗಿದೆ.

5 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಸಿಎಂ ನಿತೀಶ್ ಕುಮಾರ್ ನೇತೃತ್ವದ ಬಿಜೆಪಿ ಮತ್ತು ಜೆಡಿಯು ಮೈತ್ರಿಕೂಟ ಅಧಿಕಾರ ಕಳೆದುಕೊಳ್ಳುವ ನಿರೀಕ್ಷೆ ಇದೆ. ಆರ್‌ಜೆಡಿ, ಜೆಡಿಯು ಮತ್ತು ಎಡಪಕ್ಷಗಳ ಮಹಾಮೈತ್ರಿಕೂಟ ಅಧಿಕಾರಕ್ಕೆ ಬರಲಿದ್ದು, ಲಾಲೂಪ್ರಸಾದ್ ಯಾದವ್ ಪುತ್ರ ತೇಜಸ್ವಿ ಯಾದವ್ ಸಿಎಂ ಆಗಲಿದ್ದಾರೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ. ಅದರಲ್ಲೂ ಇಂಡಿಯಾ ಟುಡೇ-ಆಕ್ಸಿಸ್ ಸರ್ವೆ ಮತ್ತು ಟುಡೇಸ್ ಚಾಣಕ್ಯ ಸರ್ವೆ ಮಹಾಮೈತ್ರಿಕೂಟಕ್ಕೆ ಪ್ರಚಂಡ ಬಹುಮತವನ್ನು ಅಂದಾಜಿಸಿದೆ.


Spread the love

About Laxminews 24x7

Check Also

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ