Breaking News

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿ ಮತ್ತು ಅವರ ಆಪ್ತರ ವಿರುದ್ಧ ಪ್ರಕರಣ ದಾಖಲಾ

Spread the love

ಬೆಳಗಾವಿ: ಬಿಜೆಪಿ ಕಾರ್ಯಕರ್ತ ಪೃಥ್ವಿ ಸಿಂಗ್ ಮೇಲೆ ಚಾಕು ಇರಿತ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಚನ್ನರಾಜ್​ ಹಟ್ಟಿಹೊಳಿ ಮತ್ತು ಅವರ ಇಬ್ಬರು ಆಪ್ತರ ವಿರುದ್ಧ ಜಾತಿ ನಿಂದನೆ‌ ಕೇಸ್ ದಾಖಲಾಗಿದೆ.

ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 1860(U/s 143, 147, 148, 323, 324, 379, 504, 506), ಅಟ್ರಾಸಿಟಿ ಕೇಸ್ ಮತ್ತು ಐಪಿಸಿ ಸೆಕ್ಷನ್ 1989(u/s-3(1), (r)(s), 3(2)(v-a), IPC 1860(u/s-149ರಡಿ ಕೇಸ್ ಎಂಎಲ್‌ಸಿ ಚನ್ನರಾಜ್ ಹಟ್ಟಿಹೊಳಿ, ಆಪ್ತ ಸುಜಿತ್ ಜಾಧವ್, ಸದ್ದಾಂ ವಿರುದ್ಧ ಪ್ರಕರಣ ದಾಖಲಾಗಿದೆ.

ಪೃಥ್ವಿ ಸಿಂಗ್ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಸಹೋದರ, ಎಂಎಲ್​ಸಿ ಚನ್ನರಾಜ್ ಹಟ್ಟಿಹೊಳಿ ಹಾಗೂ ಬೆಂಬಲಿಗರು ಹಲ್ಲೆ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಪೃಥ್ವಿ ಸಿಂಗ್ ಪುತ್ರ ಜಸ್ವೀರ್ ಸಿಂಗ್ ಎಪಿಎಂಸಿ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

 


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ