Breaking News

ಚಿಕ್ಕಮಗಳೂರು ವಕೀಲನ ಮೇಲೆ ಪೊಲೀಸರ ಹಲ್ಲೆ ಪ್ರಕರಣ ಸಿಐಡಿಗೆ ಹಸ್ತಾಂತರ

Spread the love

ಬೆಂಗಳೂರು: ಚಿಕ್ಕಮಗಳೂರಿನ ವಕೀಲ ಪ್ರೀತಮ್ ಅವರ ಮೇಲಿನ ಪೊಲೀಸರ ಹಲ್ಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್​ಗೆ ಮಾಹಿತಿ ನೀಡಿದೆ.

ಘಟನೆಗೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಮಾಹಿತಿ ನೀಡಿದರು.

ವಿಚಾರಣೆ ಆರಂಭವಾಗುತ್ತಿದ್ದಂತೆ ಚಿಕ್ಕಮಗಳೂರು ವಕೀಲರ ಸಂಘದ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲರಾದ ಕೆ ಎನ್ ಫಣೀಂದ್ರ ಮತ್ತು ಡಿ ಆರ್ ರವಿಶಂಕರ್ ಅವರು ಪ್ರೀತಮ್ ಘಟನೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಇತರ ವಕೀಲರ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. ಪೊಲೀಸರೂ ಪ್ರತಿಭಟನೆ ನಡೆಸಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಚಿಕ್ಕಮಗಳೂರು ವಕೀಲರು ನಿರಂತರವಾಗಿ ನ್ಯಾಯಾಲಯದ ಕಲಾಪದಿಂದ ದೂರ ಉಳಿಯುವುದು ಸರಿಯಾದ ಕ್ರಮವಲ್ಲ. ಇದು ಸಮರ್ಥನೀಯವಲ್ಲ ಎಂದು ತಿಳಿಸಿತು. ಈ ವೇಳೆ ಪ್ರತಿಕ್ರಿಯಿಸಿದ ಅಡ್ವೊಕೇಟ್ ಜನರಲ್, ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಸೂಕ್ತ ರೀತಿಯಲ್ಲಿ ತನಿಖೆ ನಡೆಸಲಾಗುವುದು. ಪ್ರತಿಭಟನೆಯಲ್ಲಿ ನಿರತವಾಗಿದ್ದ ಪೊಲೀಸರ ವಿರುದ್ಧ ಯಾವ ಕ್ರಮಕೈಗೊಳ್ಳಲಾಗಿದೆ ಎಂದು ಪೀಠದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಎಜಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಪೀಠಕ್ಕೆ ಭರವಸೆ ನೀಡಿದರು. ಈ ಅಂಶವನ್ನು ದಾಖಲಿಸಿಕೊಂಡ ನ್ಯಾಯಪೀಠ, ಪ್ರಕರಣದ ತನಿಖೆಯನ್ನು ಡಿಜಿಪಿ ಮಟ್ಟದ ಅಧಿಕಾರಿ ತನಿಖೆ ನಡೆಸಬೇಕು. ಡಿಐಜಿ ಮಟ್ಟದ ಅಧಿಕಾರಿಯು ನಿಗಾವಹಿಸಬೇಕು ಎಂದು ತಿಳಿಸಿತು.


Spread the love

About Laxminews 24x7

Check Also

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಏಳು ಆರೋಪಿಗಳ ಪೈಕಿ ಇಬ್ಬರಿಗೆ ಶ್ಯೂರಿಟಿ ಸಿಕ್ಕಿಲ್ಲ.

Spread the loveಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಪಾಲಾಗಿ ಜಾಮೀನು ಪಡೆದಿದ್ದ ಏಳು ಮಂದಿ ಆರೋಪಿಗಳ ಪೈಕಿ ಇಬ್ಬರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ