Breaking News

ವೈಯಕ್ತಿಕವಾಗಿ ಕೆಣಕಿದ್ರೆ ನಾನು ಸುಮ್ಮನೆ ಇರಲ್ಲ:H.D.K.

Spread the love

ಬೆಳಗಾವಿ/ಬೆಂಗಳೂರು : ವರ್ಗಾವಣೆ ದಂಧೆ ಸೇರಿ ಬೇರೆ ಬೇರೆ ವಿಚಾರಗಳ ಬಗ್ಗೆ ಮುಂದಿನ ಜಂಟಿ ಅಧಿವೇಶನದಲ್ಲಿ ಮಾತನಾಡುತ್ತೇನೆ. ಒಂದು ವೇಳೆ ವೈಯಕ್ತಿಕವಾಗಿ ಕೆಣಕಿದ್ರೆ ನಾನು ಸುಮ್ನೆ ಇರಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

 

ಅಧಿವೇಶನಕ್ಕೆ ಆಗಮಿಸಿದ ಹೆಚ್.ಡಿ ಕುಮಾರಸ್ವಾಮಿ ಸುವರ್ಣಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತ, ಬರ ನಿರ್ವಹಣೆ, ಉತ್ತರ ಕರ್ನಾಟಕ ಅಭಿವೃದ್ಧಿ ನನ್ನ ಆದ್ಯತೆ. ಈ ಬಗ್ಗೆ ಚಳಿಗಾಲ ಅಧಿವೇಶನದಲ್ಲಿ ಚರ್ಚೆ ಮಾತನಾಡುತ್ತೇನೆ. ಈ ಭಾಗದ ಜನರು ಸಾಕಷ್ಟು ನಿರೀಕ್ಷೆ ಇಟ್ಟಿಕೊಂಡಿದ್ದಾರೆ. ಈ ಸಂಬಂಧ ನಾವು ಮತ್ತು ಬಿಜೆಪಿ ಜಂಟಿಯಾಗಿ ಹೋರಾಟ ಮಾಡುತ್ತೇವೆ. ಬಿಜೆಪಿ ಅಧಿಕೃತ ವಿರೋಧ ಪಕ್ಷ ಎಂದರು.

ಜನವರಿಯಲ್ಲಿ ಜಂಟಿ ಅಧಿವೇಶನ ಇದೆ. ವರ್ಗಾವಣೆ ದಂಧೆ ಸೇರಿ ಬೇರೆ ಬೇರೆ ವಿಚಾರಗಳ ಬಗ್ಗೆ ಜಂಟಿ ಅಧಿವೇಶನದಲ್ಲಿ ಮಾತನಾಡುತ್ತೇನೆ. ಒಂದು ವೇಳೆ ವೈಯಕ್ತಿಕವಾಗಿ ಕೆಣಕಿದ್ರೆ ನಾನು ಸುಮ್ನೆ ಇರಲ್ಲ. ಸರ್ಕಾರ ಬಂದು ಆರು ತಿಂಗಳು ಆಗಿದೆ. ಇನ್ನು ನಾಲ್ಕೂವರೆ ವರ್ಷ ಸರ್ಕಾರ ಇರುತ್ತೆ. ಹಂತ ಹಂತವಾಗಿ ಎಲ್ಲ ವಿಚಾರದ ಬಗ್ಗೆ ಮಾತನಾಡುತ್ತೇನೆ ಎಂದರು.


Spread the love

About Laxminews 24x7

Check Also

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡಲ್ಲ: ತಿರುವಾಂಕೂರು ದೇವಸ್ವಂ ಮಂಡಳಿ ನಿರ್ಣಯ

Spread the loveತಿರುವಂತಪುರ: ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ  ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (TDB) ಮಹತ್ವದ ನಿರ್ಣಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ