ಶಿವಮೊಗ್ಗ: ಮುಸ್ಲಿಂ ಸಮುದಾಯಕ್ಕೆ ಅನುದಾನ ನೀಡುವ ಕುರಿತು ಸಿಎಂ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಯನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಟೀಕಿಸಿದ್ದಾರೆ.
ಅವರು ರಾಜ್ಯದ ಸಿಎಂ ಆಗಿದ್ದುಕೊಂಡು ಒಂದು ಸಮುದಾಯವನ್ನು ಓಲೈಕೆ ಮಾಡುತ್ತಿರುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಹೇಳಿದರು.
ನಗರದಲ್ಲಿನ ಅವರ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಒಬ್ಬ ಮುಖ್ಯಮಂತ್ರಿಯಾಗಿ ಅಲ್ಪಸಂಖ್ಯಾತರರಿಗೆ ಹಣ ಕೊಡಲು ಅಭ್ಯಂತರವಿಲ್ಲ. ಆದರೆ, ಹಣದ ಹೆಸರಲ್ಲಿ ಅಲ್ಪಸಂಖ್ಯಾತರ ಓಲೈಕೆ ಮಾಡ್ತಿರೋದು ತರವಲ್ಲ. ಈ ಹೇಳಿಕೆ ಹಿಂದೂಗಳ ಆಕ್ರೋಶಕ್ಕೆ ಅವಕಾಶ ಮಾಡಿಕೊಡುತ್ತದೆ. ಈ ರೀತಿ ಮಾತುಗಳನ್ನು ಸಿಎಂ ಅವರಿಂದ ನಿರೀಕ್ಷೆ ಮಾಡಿರಲಿಲ್ಲ. ಈಗಾಗಲೇ ಅವರ ಹೇಳಿಕೆಯನ್ನು ಮಠಾಧೀಶರು ಸೇರಿ ಎಲ್ಲೆಡೆಯಿಂದ ಖಂಡನೆ ವ್ಯಕ್ತವಾಗಿದೆ. ಏನಾದರೂ ಹೇಳುವಾಗ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.