Breaking News

ಮುಸ್ಲಿಂ ಸಮುದಾಯಕ್ಕೆ ಸಿಎಂ ಅನುದಾನ ಘೋಷಣೆ ವಿಚಾರ: ವಿಧಾನಸಭೆಯಲ್ಲಿ ಗದ್ದಲ, ಬಿಜೆಪಿ ಸಭಾತ್ಯಾಗ

Spread the love

ಬೆಳಗಾವಿ/ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹುಬ್ಬಳ್ಳಿಯಲ್ಲಿ ನಡೆದ ಸಮಾವೇಶದಲ್ಲಿ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ.

ನೀಡುವುದಾಗಿ ಘೋಷಿಸಿದ ವಿಚಾರ ಇಂದು ವಿಧಾನಸಭೆಯಲ್ಲಿ ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರಕ್ಕೆ ಕಾರಣವಾಯಿತು. ಸದನದಲ್ಲಿ ಗದ್ದಲ ಉಂಟುಮಾಡಿದ ಪ್ರತಿಪಕ್ಷದ ಸದಸ್ಯರು, ಮುಖ್ಯಮಂತ್ರಿಗಳು ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು. ಆದರೆ, ಇದಕ್ಕೆ ಸರ್ಕಾರ ಸ್ಪಂದಿಸಲಿಲ್ಲ. ಇದರಿಂದ ಆಕ್ರೋಶಗೊಂಡ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು.

ಪ್ರಶ್ನೋತ್ತರ ಸಮಯ ಮುಗಿದ ಬಳಿಕ ಸದನದಲ್ಲಿ ಬಿಜೆಪಿ ಶಾಸಕ ಟಿ.ಸುನೀಲ್ ಕುಮಾರ್ ವಿಷಯ ಪ್ರಸ್ತಾಪಿಸಿ, ವಿಧಾನಮಂಡಲದ ಅಧಿವೇಶನ ನಡೆಯುವಾಗ ಮುಖ್ಯಮಂತ್ರಿಗಳು, ಈ ರೀತಿ ಅನುದಾನ ಘೋಷಣೆ ಮಾಡುವುದು ಎಷ್ಟರ ಮಟ್ಟಿಗೆ ಸರಿ?. ಈ ಕುರಿತು ಸಿಎಂ ಸದನಕ್ಕೆ ವಿವರಣೆ ನೀಡಬೇಕೆಂದು ಆಗ್ರಹಿಸಿದರು.

ಇದಕ್ಕೆ ಆಡಳಿತ ಪಕ್ಷದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು ಗದ್ದಲ ಉಂಟಾಯಿತು. ಸ್ಪೀಕರ್ ಯು.ಟಿ.ಖಾದರ್ ಪದೇ ಪದೇ ಮಾಡಿದ ಮನವಿಯೂ ವಿಫಲವಾಯಿತು. ಎರಡೂ ಕಡೆಯ ಸದಸ್ಯರು ಮಾತಿನ ಚಕಮಕಿಯಲ್ಲೇ ತೊಡಗಿದ್ದರು. ನಂತರ ಸ್ಪೀಕರ್ ಪ್ರತಿಪಕ್ಷದ ನಾಯಕರಿಗೆ ಮಾತನಾಡಲು ಅವಕಾಶ ನೀಡಿದಾಗ ಗದ್ದಲ ಸ್ವಲ್ಪಮಟ್ಟಿಗೆ ತಗ್ಗಿತು. ಆಗ ಆರ್.ಅಶೋಕ್ ಮಾತನಾಡಿ, ರೈತರಿಗೆ ಅನುದಾನ ಕೊಡಲು ಹಣವಿಲ್ಲ. ಅಲ್ಲಿ ಹತ್ತು ಸಾವಿರ ಕೋಟಿ ರೂ. ಅನುದಾನ ನೀಡುವುದಾಗಿ ಘೋಷಿಸಿದ್ದಾರೆ. ಸದನ ನಡೆಯುವಾಗ ಈ ರೀತಿ ಘೋಷಣೆ ಮಾಡುವುದು ತಪ್ಪು. ಮುಖ್ಯಮಂತ್ರಿ ಘೋಷಣೆ ಮಾಡಿರುವ ವಿಡಿಯೋ ತುಣುಕು ನೋಡಿದ್ದೇನೆ. ಅವರು 10 ಸಾವಿರ ಕೋಟಿ ರೂ. ಅನುದಾನ ಘೋಷಣೆ ಮಾಡಿರುವುದು ಸತ್ಯ. ಹಾಗಾಗಿ ಮುಖ್ಯಮಂತ್ರಿಗಳು ತಮ್ಮ ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

 


Spread the love

About Laxminews 24x7

Check Also

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಬೇಕು. ಇಲ್ಲದಿದ್ದರೆ ಸರ್ಕಾರವೇ ಪತನವಾಗುತ್ತದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟ‌ರ್ ಭವಿಷ್ಯ ನುಡಿದಿದ್ದಾರೆ.

Spread the love ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಬೇಕು. ಇಲ್ಲದಿದ್ದರೆ ಸರ್ಕಾರವೇ ಪತನವಾಗುತ್ತದೆ ಎಂದು ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ