ಬೆಳಗಾವಿ: ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳಿಗೆ ಆರೋಗ್ಯ ಇಲಾಖೆ ಹೊಸ ರೂಪ ನೀಡಿದ್ದು, ಮರುನಾಮಕರಣಗೊಂಡ ನವೀಕೃತ ಹೆಲ್ತ್ ಕಾರ್ಡ್ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬಿಡುಗಡೆಗೊಳಿಸಿದರು. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ಗಳನ್ನು ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನಾರೋಗ್ಯ, ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಎಂದು ನವೀಕರಿಸಲಾಗಿದೆ.
ಸುವರ್ಣಸೌಧದಲ್ಲಿ ನಡೆದ ಹೆಲ್ತ್ ಕಾರ್ಡ್ ಬಿಡುಗಡೆ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್ನಲ್ಲಿ ಕೆಲ ಬದಲಾವಣೆ ತರಲಾಗಿದೆ. ರಾಜ್ಯದ 5.9 ಕೋಟಿ ಜನರಿಗೆ ಹೆಲ್ತ್ ಕಾರ್ಡ್ಗಳನ್ನು ವಿತರಿಸುವ ಗುರಿಯನ್ನು ಆರೋಗ್ಯ ಇಲಾಖೆ ಹಾಕಿಕೊಂಡಿದ್ದು, ನೂತನ ಕಾರ್ಡ್‌ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ರಾಜ್ಯದ ಪ್ರತಿಯೊಬ್ಬ ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆ ಹಾಗೂ ಚಿಕಿತ್ಸೆ ಒದಗಿಸಬೇಕೆನ್ನುವುದು ರಾಜ್ಯ ಸರ್ಕಾರದ ಆದ್ಯತೆಗಳಲ್ಲಿ ಒಂದು ಎಂದು ತಿಳಿಸಿದರು.