Breaking News

ಸುಳ್ಳು ಆರೋಪ ಮಾಡಿದ ಬಿಜೆಪಿಯವರ ವಿರುದ್ಧ ಮಾನನಷ್ಟ ಮೊಕದ್ದಮೆ: ಪ್ರಿಯಾಂಕ್‌ ಖರ್ಗೆ

Spread the love

ಬೆಳಗಾವಿ: ಕಾರು ಅಪಘಾತ ಪ್ರಕರಣವನ್ನು ಹಲ್ಲೆ ಎಂದು ಬಿಂಬಿಸಿ ತಮ್ಮ ಮೇಲೆ ಸುಳ್ಳು ಆರೋಪ ಮಾಡಿದ್ದ ಮಣಿಕಠ ರಾಠೋಡ್ ಹಾಗೂ ಬಿಜೆಪಿಯವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡುತ್ತೇನೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಎಚ್ಚರಿಕೆ ನೀಡಿದ್ದಾರೆ.

 

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಣಿಕಂಠ ರಾಠೋಡ್‌ ಮೇಲಿನ ಹಲ್ಲೆ ಪ್ರಕರಣದ ಸತ್ಯಾಸತ್ಯತೆ ಪೊಲೀಸರ ತನಿಖೆಯಿಂದ ಬಯಲಾಗಿದೆ. ಅಪಘಾತವನ್ನು ಹಲ್ಲೆ ಎಂದು ಕಥೆ ಕಟ್ಟಿ, ನನ್ನ ವಿರುದ್ಧ ಆರೋಪ ಮಾಡಿದ್ದ ಬಿಜೆಪಿ ನಾಯಕರು ಈಗ ಏನು ಹೇಳುತ್ತಾರೆ ಎಂದು ಕಿಡಿಕಾರಿದ್ದಾರೆ.

ಚಿತ್ತಾಪುರದಲ್ಲಿ ಮಣಿಕಂಠ ರಾಥೋಡ್ ಒಂದು ದೂರು ಕೊಟ್ಟಿದ್ದ. ಆತ ಬಿಜೆಪಿ ಅಭ್ಯರ್ಥಿ. ಚಿತ್ತಾಪುರದಿಂದ ಮಾಲಗತ್ತಿಗೆ ಹೋಗುವಾಗ ಆತನ ಮೇಲೆ ಹಲ್ಲೆ ಮಾಡಿದ್ದರು ಎಂದು ಆರೋಪಿಸಿದ್ದ. ಆಲ್ಟ್ರೋಜ್ ಕಾರಿನ ಮೇಲೆ 8 ರಿಂದ 10 ಜನ ಹಲ್ಲೆ ಮಾಡಿದ್ದರು ಎಂದು ದೂರು ಕೊಟ್ಟಿದ್ದ. ಅಧಿಕಾರಿಗಳು ಮತ್ತು ರಾಜಕೀಯ ವಿರೋಧಿಗಳು ನನ್ನ ಹಲ್ಲೆ ಮಾಡುತ್ತಾರೆ ಎಂದು ಹೇಳಿದ್ದ. ಆದರೆ, ರಾಥೋಡ್ ಮೇಲೆ ಸಾಕಷ್ಟು ಆರೋಪಗಳಿದ್ವು. ಅಕ್ಕಿ ಕಳ್ಳತನದಲ್ಲಿ 22 ಕೇಸ್ ಇದೆ. ಹಾಲಿನ ಪೌಡರ್ ಕಳ್ಳತನದಲ್ಲಿ 1 ಕೇಸ್, ಇನ್ನು ಮೂರು ಪ್ರಕರಣಗಳಲ್ಲಿ ಈಗಾಗಲೇ ಆರೋಪ ಸಾಬೀತಾಗಿದೆ. ಅದು ಬಿಜೆಪಿ ಸರ್ಕಾರದ ಅವಧಿಯಲ್ಲೇ ಆಗಿರುವುದು ಎಂದು ತಿಳಿಸಿದರು.


Spread the love

About Laxminews 24x7

Check Also

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ

Spread the love ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ