ಬೆಳಗಾವಿ: ಟಿಪ್ಪರ್ ಮತ್ತು ಕಾರಿನ ಮಧ್ಯೆ ಅಪಘಾತದಲ್ಲಿ ಟಿಪ್ಪರ್ನ ಡೀಸೆಲ್ ಟ್ಯಾಂಕರ್ ಸ್ಫೋಟಿಸಿ ಹೊತ್ತಿಕೊಂಡ ಬೆಂಕಿಯಿಂದ ಇಬ್ಬರು ಸಜೀವ ದಹನವಾಗಿರುವ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ-ಬಂಬರಗಾ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಬಂಬರಗಾ ಗ್ರಾಮದ ಮೋಹನ್ ಮಾರುತಿ ಬೆಳ್ಗಾಂವಕರ್ (24), ಮಚ್ಚೆ ಗ್ರಾಮದ ಬಾಲಕಿ ಸಮಿಕ್ಷಾ ಡಿಯೇಕರ್ (12) ಎಂದು ಗುರುತಿಸಲಾಗಿದೆ.
ಸಂಬಂಧಿಕರ ಮದುವೆ ಮುಗಿಸಿಕೊಂಡು ರಾತ್ರಿ ಬಂಬರಗಾ ಗ್ರಾಮಕ್ಕೆ ಬರುವಾಗ ಕಾರು ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿದೆ. ಬಂಬರಗಾ ಕ್ರಾಸ್ ಬಳಿ ಅಡ್ಡ ಬಂದ ಟಿಪ್ಪರ್‌ಗೆ ಕಾರು ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಟಿಪ್ಪರ್ನ ಡಿಸೇಲ್ ಟ್ಯಾಂಕ್ ಒಡೆದು ಬೆಂಕಿ ಹೊತ್ತಿ ಉರಿದಿದೆ. ಈ ವೇಳೆ ಕಾರಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಸಜೀವ ದಹನವಾಗಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡ ಮತ್ತಿಬ್ಬರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳುಗಳಾದ ಮಹೇಶ್ ಬೆಳಗಾಂವಕರ್ ಮತ್ತು ಸ್ನೇಹಾ ಬೆಳಗುಂದಕರ್ ಸದ್ಯ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Laxmi News 24×7