ಬೆಳಗಾವಿ: ಹುಬ್ಬಳ್ಳಿಯಲ್ಲಿ ಮುಸ್ಲಿಂ ಮೌಲ್ವಿ ಜೊತೆ ವೇದಿಕೆ ಹಂಚಿಕೊಂಡ ಕುರಿತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ತಮ್ಮ ವಿರುದ್ಧ ಮಾಡಿರುವ ಟೀಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಗುರುವಾರ ಬೆಳಿಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ, ದ್ವೇಷ ರಾಜಕಾರಣ ಮಾಡುವುದೇ ಬಸನಗೌಡ ಪಾಟೀಲ್ ಯತ್ನಾಳ ಕೆಲಸ.
ಮೌಲ್ವಿ ತನ್ವೀರ ಪೀರ್ ಹಾಶ್ಮಿ ನನಗೆ ಬಹಳ ವರ್ಷಗಳಿಂದ ಪರಿಚಯ ಇದ್ದಾರೆ. ಒಂದು ವೇಳೆ ಅವರಿಗೆ ಐಸಿಸ್ ಜೊತೆ ನಂಟಿದ್ದರೆ, ಕೇಂದ್ರದಲ್ಲಿ ನಿಮ್ಮದೆ ಸರ್ಕಾರ ಇದೆ ತನಿಖೆ ಮಾಡಿಸಿ ಎಂದು ಸಿದ್ದರಾಮಯ್ಯ ನುಡಿದರು.
ಬಸನಗೌಡ ಯತ್ನಾಳ ಬಿಜೆಪಿ ರಾಜ್ಯಾಧ್ಯಕ್ಷ ಇಲ್ಲವೆ ಪ್ರತಿಪಕ್ಷದ ನಾಯಕನಾಗುವ ಆಸೆ ಇಟ್ಟುಕೊಂಡಿದ್ದರು. ಆದರೆ, ಅವೆರಡು ಸ್ಥಾನ ಕೈತಪ್ಪಿದ್ದರಿಂದ ಹತಾಶೆಗೊಂಡು ಹೀಗೆ ನಮ್ಮ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅವನೊಬ್ಬ ಮಹಾನ ಸುಳ್ಳುಗಾರ ಎಂದರು.
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹುಬ್ಬಳ್ಳಿಯ ಕಾರ್ಯಕ್ರಮದಲ್ಲಿ ಐಸಿಸ್ ಭಯೋತ್ಪಾದಕರ ಬೆಂಬಲಗನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ. ತನ್ವೀರಾ ಪೀರಾ ಎಂಬ ಮುಸ್ಲಿಂ ಮೌಲ್ವಿ ಯೆಮೆನ್, ಸೌದಿ ಹಗೂ ಮಧ್ಯ ಪ್ರಾಚ್ಯ ದೇಶಗಳ ಪ್ರವಾಸಗಳ ವೇಳೆ ಭಯೋತ್ಪಾದಕ ಸಂಘಟನೆಗಳ ಪ್ರಮುಖರನ್ನು ಭೇಟಿ ಮಾಡಿದ್ದ ಎಂದು ಯತ್ನಾಳ ಟ್ವೀಟ್ ಮಾಡಿ, ಸಿಎಂ ವಿರುದ್ಧ ಟೀಕೆ ಮಾಡಿದ್ದರು.