Breaking News

ಡ್ರಗ್ಸ್ ದಂಧೆಯನ್ನು ಬಯಲಿಗೆಳೆಯುತ್ತಾನೆ ಎಂದು ಟಿವಿ ಪತ್ರಕರ್ತನನ್ನು ಕತ್ತು ಹಿಸುಕಿ ಕೊಲೆ

Spread the love

ಚೆನ್ನೈ: ಡ್ರಗ್ಸ್ ದಂಧೆಯನ್ನು ಬಯಲಿಗೆಳೆಯುತ್ತಾನೆ ಎಂದು ಟಿವಿ ಪತ್ರಕರ್ತನನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.

ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಡ್ರಗ್ ಡೀಲರ್‍ಗಳ ಕುರಿತು ಪೊಲೀಸರಿಗೆ ಮಾಹಿತಿ ನೀಡುತ್ತಾನೆ ಎಂಬ ಭಯದಲ್ಲಿ ಗ್ಯಾಂಗ್ ಪತ್ರಕರ್ತನನ್ನು ಹತ್ಯೆ ಮಾಡಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇಸ್ರೇವೆಲ್ ಮೋಸಸ್(27) ಕೊಲೆಯಾದ ಪತ್ರಕರ್ತ, ಭಾನುವಾರ ಸಂಜೆ ಅವರನ್ನು ಮನೆಯಿಂದ ಹೊರಗೆ ಕರೆದೊಯ್ದು, ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾರೆ. ದಾಳಿ ಮಾಡಿದವರು ಆತನ ಸ್ನೇಹಿತರೇ ಇರಬೇಕು ಎಂದು ಆರಂಭದಲ್ಲಿ ಕುಟುಂಬಸ್ಥರು ಅಂದುಕೊಂಡಿದ್ದರು.

ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಅತಿಕ್ರಮಣ ಮಾಡಿದ ಭೂಮಿಯನ್ನು ಮಾರಾಟ ಮಾಡುವುದು ಹಾಗೂ ಸ್ಥಳೀಯ ಕೆರೆಯ ಸುತ್ತ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಸೆಸ್ ಯಾವುದೇ ರೀತಿಯ ಸುದ್ದಿಯನ್ನು ಬಿತ್ತರಿಸಿರಲಿಲ್ಲ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಪ್ರಕರಣದ ಕುರಿತು ಮೋಸೆಸ್ ತಂದೆ ಜ್ಞಾನರಾಜ್ ಪ್ರಕರಣದ ಕುರಿತು ಪ್ರತಿಕ್ರಿಯಿಸಿ, ನನ್ನ ಮಗ ದೂರು ನೀಡಿದ ಬಳಿಕ ಜಿಲ್ಲಾ ಪೊಲೀಸರು ಯಾವುದೇ ರೀತಿಯ ಕ್ರಮ ಕೈಗೊಳ್ಳಲಿಲ್ಲ. ಹೀಗಾಗಿ ಅವರ ಜೀವ ಅಪಾಯದಲ್ಲಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಆರೋಪವನ್ನು ಪೊಲೀಸರು ನಿರಾಕರಿಸಿದ್ದು, ಮೋಸೆಸ್ ನಮಗೆ ಯಾವುದೇ ರೀತಿಯ ಮಾಹಿತಿಯನ್ನು ನೀಡಿಲ್ಲ. ಈ ಕೊಲೆ ಭೂಮಿ ವಿಚಾರವಾಗಿ ವೈಯಕ್ತಿಕ ಪ್ರತಿಕಾರ ತೀರಿಸಿಕೊಳ್ಳಲು ನಡೆದಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥ ಡಿ.ಶಣ್ಮುಗಪ್ರಿಯ ತಿಳಿಸಿದ್ದಾರೆ. ಆದರೆ ಪೊಲೀಸರ ಈ ವಾದವನ್ನು ಹಿರಿಯ ಪತ್ರಕರ್ತೆ ಭಾರತಿ ತಮಿಝಾನ್ ಅಲ್ಲಗಳೆದಿದ್ದಾರೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ