ಬೆಳಗಾವಿ: ಕಳೆದ 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ವಿಆರ್ಡಬ್ಬ್ಯೂ, ಯುಆರ್ಡಬ್ಬ್ಯೂ, ಎಂಆರ್ಡಬ್ಲ್ಯೂಗಳ ಸೇವೆಯನ್ನು ಖಾಯಂಗೊಳಿಸುವುದೂ ಸೇರಿದಂತೆ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸುವರ್ಣ ಗಾರ್ಡನ್ ಬಳಿಯ ಟೆಂಟ್ನಲ್ಲಿ ಇಂದು ಕರ್ನಾಟಕ ರಾಜ್ಯ ವಿಶೇಷಚೇತನರ ಹಾಗೂ ವಿವಿಧೋದ್ಧೇಶ ಮತ್ತು ಗ್ರಾಮೀಣ ಮತ್ತು ನಗರ ಪುನರ್ವಸತಿ ಕಾರ್ಯಕರ್ತರ ರಾಜ್ಯ ಒಕ್ಕೂಟದಿಂದ ಪ್ರತಿಭಟನೆ ನಡೆಯಿತು.
ವಿಶೇಷಚೇತನರು ಹಾಗೂ ಹಿರಿಯ ನಾಗರಿಕರಿಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಕನಿಷ್ಠ ವೇತನ ಜಾರಿಗೊಳಿಸಬೇಕು. ಸೇವಾ ಭದ್ರತೆ ಕಲ್ಪಿಸಬೇಕು. ಸರ್ಕಾರದ ವಿವಿಧ ಹಂತದಲ್ಲಿ ಕಾರ್ಯಕರ್ತರ ಬೇಡಿಕೆಯ ಕಡತಗಳು ಬಾಕಿ ಇದ್ದು, ಅವುಗಳನ್ನು ಕೂಡಲೇ ಅನುಷ್ಠಾನಗೊಳಿಸಬೇಕೆಂದು ಅವರು ಆಗ್ರಹಿಸಿದರು.