Breaking News

ಯತ್ನಾಳ್ ಒಬ್ಬ ಮಹಾ ಸುಳ್ಳುಗಾರ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

Spread the love

ಬೆಳಗಾವಿ: ”ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಒಬ್ಬ ಮಹಾ ಸುಳ್ಳುಗಾರ. ಅವರು ಅಲ್ಪಸಂಖ್ಯಾತರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಾರೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

 

ತೆಲಂಗಾಣ ಮುಖ್ಯಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ತೆರಳುವ ಮುನ್ನ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಯತ್ನಾಳ್ ಅವರ ಹೇಳಿಕೆ ವಿರುದ್ಧ ಕಿಡಿಕಾರಿದರು. ವಿರೋಧ ಪಕ್ಷದ ನಾಯಕನ ಸ್ಥಾನ ಹಾಗೂ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಯತ್ನಾಳ್ ಪ್ರಯತ್ನಿಸಿದ್ದರು. ಎರಡೂ ಹುದ್ದೆಗಳು ಸಿಗದಿರುವ ಕಾರಣ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಹುಬ್ಬಳ್ಳಿ ಕಾರ್ಯಕ್ರಮದಲ್ಲಿ ಮೌಲ್ವಿ ಸೈಯದ್ ಮೊಹಮ್ಮದ್ ತನ್ವೀರ್ ಹಾಶ್ಮಿ ಜೊತೆಗೆ ವೇದಿಕೆ ಹಂಚಿಕೊಂಡಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಹಾಶ್ಮಿ ಅವರು ದರ್ಗಾದ ಧರ್ಮಾಧಿಕಾರಿ, ಅವರೊಂದಿಗೆ ಬಹಳ ವರ್ಷಗಳಿಂದ ಒಡನಾಟ ಇದೆ ಎಂದರು. ಯತ್ನಾಳ್ ಒಬ್ಬ ಮಹಾ ಸುಳ್ಳುಗಾರ ಎಂದು ಕುಟುಕಿದ ಸಿಎಂ, ಹಾಶ್ಮಿ ಅವರ ಮೇಲಿನ ಆರೋಪ ಸಾಬೀತು ಮಾಡಲಿ ಎಂದು ಸವಾಲು ಹಾಕಿದರು. ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವೇ 10 ವರ್ಷಗಳಿಂದ ಆಡಳಿತದಲ್ಲಿದೆ. ಮೌಲ್ವಿ ಹಾಶ್ಮಿ ಅವರಿಗೆ ಉಗ್ರಗಾಮಿಗಳ ಸಂಘಟನೆ ಜೊತೆ ನಂಟು ಇರುವ ಆರೋಪದ ಬಗ್ಗೆ ತನಿಖೆ ನಡೆಸಲಿ ಎಂದರು.

 


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ