Breaking News

ಕ್ಯಾ. ಅರ್ಜುನನ ಸಮಾಧಿಗೆ ಕೈ ಮುಗಿದು ನಮಸ್ಕರಿಸಿದ ಮಹಾರಾಜ ಯದುವೀರ್ ಒಡೆಯರ್

Spread the love

ಹಾಸನ: ಕಾಡಾನೆ ದಾಳಿಯಲ್ಲಿ ದಸರಾ ಆನೆ ಅರ್ಜುನ ಮೃತಪಟ್ಟ ಹಿನ್ನೆಲೆ ಅರ್ಜುನನ ಸಮಾಧಿಗೆ ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಜಯಚಾಮರಾಜ ಒಡೆಯರ್ ಹಾಗೂ ಧರ್ಮಪತ್ನಿ ತ್ರಿಷಿಕಾ ಕುಮಾರಿ ಒಡೆಯರ್ ಆಗಮಿಸಿ ನಮಸ್ಕರಿಸಿದರು.

 

ಹಾಸನದ ಸಕಲೇಶಪುರದಲ್ಲಿ ಕಾಡಾನೆ ಕಾರ್ಯಾಚರಣೆ ವೇಳೆ ಬಲಿಷ್ಠವಾದ ಒಂಟಿ ಸಲಗದ ದಾಳಿಗೆ ಅರ್ಜುನ ಗಾಯಗೊಂಡು ಸಾವನ್ನಪ್ಪಿದ್ದ. ಮೃತ ಕ್ಯಾಪ್ಟನ್​ ಅರ್ಜುನನ್ನು ಹಾಸನದ ಯಸಳೂರಿನ ದಬ್ಬಳ್ಳಿಕಟ್ಟೆಯಲ್ಲಿ ಸಮಾಧಿ ಮಾಡಲಾಗಿತ್ತು. ಇಂದು ಹಾಸನಕ್ಕೆ ಆಗಮಿಸಿ ಯದುವೀರ್ ಕೃಷ್ಣದತ್ತ ಜಯಚಾಮರಾಜ ಒಡೆಯರ್ ಹಾಗೂ ತ್ರಿಷಿಕಾ ಕುಮಾರಿ ಒಡೆಯರ್ 8 ಬಾರಿ ಮೈಸೂರು ಅಂಬಾರಿ ಹೊತ್ತ ಅರ್ಜುನ ಸಮಾಧಿಗೆ ಕೈಮುಗಿದು ನಮಸ್ಕರಿಸಿದರು.

ಫೇಸ್​​​ಬುಕ್​​​ ಮೂಲಕ ಬೇಸರ ವ್ಯಕ್ತಪಡಿಸಿರುವ ಒಡೆಯರ್​: ಅರ್ಜುನನ ಸಾವಿನ ಕುರಿತು ಮಹಾರಾಜ ಯದುವೀರ್​ ಒಡೆಯರ್​ ‘ಮೈಸೂರು ದಸರಾ ಮಹೋತ್ಸವದಲ್ಲಿ 8 ಭಾರಿ ಅಂಬಾರಿ ಹೊತ್ತಿದ್ದ ಅರ್ಜುನನ ಸಾವು ಅತೀವ ದುಃಖವನ್ನುಂಟು ಮಾಡಿದೆ. ಪೂರ್ವನಿಯೋಜಿತ ಕಾರ್ಯಕ್ರಮಗಳಿಂದ ಅರ್ಜುನನ ಅಂತ್ಯ ಸಂಸ್ಕಾರಕ್ಕೆ ಬರಲು ಸಾಧ್ಯವಾಗಲಿಲ್ಲ. ಇಂದು ಅರ್ಜುನನ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಅವನ ಸದ್ಗತಿಗಾಗಿ ಪ್ರಾರ್ಥಿಸಲಾಯಿತು’ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದು ಪೋಸ್ಟ್​ ಮಾಡಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ