Breaking News

ಟಾಟಾ ಏಸ್ ​- ಲಾರಿ ನಡುವೆ ಭೀಕರ ಅಪಘಾತ: ನಾಲ್ವರು ಸಾವು, ಒಬ್ಬನಿಗೆ ಗಾಯ

Spread the love

ರಾಯಚೂರು: ಟಾಟಾ ಏಸ್​ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿದ್ದು, ಒಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ನಡೆದಿದೆ.

 

ಇಸ್ಮಾಯಿಲ್ ರಷೀದ್ (25), ರವಿ ರಾಜಪ್ಪ (20), ರಮೇಶ ನಿಂಗಪ್ಪ ಕಣೇಕಲ್ಲೂರು (28), ಅಂಬರೀಶ್​ ಸೂಗಪ್ಪ ಕಣೇಕಲ್ಲೂರು (28) ಮೃತದುರ್ದೈವಿಗಳು ಎಂದು ಗುರುತಿಸಲಾಗಿದೆ. ಸದ್ಯ ಮೃತ ದೇಹಗಳನ್ನು ಸಿಂಧನೂರು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಗಾಯಾಳುವನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಗರದ ಸಾಯಿಸಂಗಮ ಸಪ್ಲಯರ್ಸ್​ನಲ್ಲಿ ಕೆಲಸ ಮಾಡುತ್ತಿದ್ದ ಮೃತರು ಟಾಟಾ ಏಸ್​ನಲ್ಲಿ ಮುದ್ದಾಪುರಗೆ ತೆರಳುತ್ತಿದ್ದರು. ಈ ವೇಳೆ, ಮಸ್ಕಿಯಿಂದ ಸಿಂಧನೂರಿಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಟಾಟಾ ಏಸ್​ನಲ್ಲಿದ್ದ ಐದು ಜನರ ಪೈಕಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಸಮೀರ್ ಮನೋಜ್ ಬಂಗಾಲಿ ಎನ್ನುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಮೃತ ವ್ಯಕ್ತಿಗಳ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಸಿಪಿಐ ವೀರಾರೆಡ್ಡಿ, ಪಿಎಸ್‌ಐ ಮಹ್ಮದ್ ಇಷಾಕ್ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ