ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜಕೀಯ ನಾಯಕರು, ಸಿನಿಮಾ ತಾರೆಯರು ಹಾಗೂ ಪೊಲೀಸ್ ಅಧಿಕಾರಿಗಳು ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣ ಖಾತೆಗಳನ್ನು ಸೃಷ್ಟಿ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ.
ಜಿಲ್ಲಾಧಿಕಾರಿಗಳ ಹೆಸರು ಬಳಸಿಕೊಂಡು ಹಣಕ್ಕೆ ಬೇಡಿಕೆ ಇಡುತ್ತಿರುವ ಪ್ರಕರಣಯೊಂದು ಬೆಂಗಳೂರಿನಲ್ಲಿ ವರದಿಯಾಗಿದೆ. ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಅವರ ಫೋಟೋ ಬಳಸಿಕೊಡು ಅವರ ಹೆಸರಿನಲ್ಲಿ ವಾಟ್ಸ್ಆಯಪ್ ಖಾತೆ ತೆರೆದಿರುವ ಆರೋಪಿ ಇಲಾಖೆಯ ಹಲವು ಅಧಿಕಾರಿಗಳಿಗೆ ಹಣ ನೀಡುವಂತೆ ಸಂದೇಶ ಕಳುಹಿಸಿದ್ದಾನೆ.
ತುರ್ತು ಕಾರ್ಯಕ್ಕೆ ಹಣ ಬೇಕಿದೆ ತಕ್ಷಣ ಕಳುಹಿಸಿ ಎಂದು ಸಂದೇಶ ರವಾನಿಸಿರುವುದನ್ನ ಕಂಡ ಅಧಿಕಾರಿಗಳು, ಅನುಮಾನಗೊಂಡು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಸದ್ಯ ಈ ಕುರಿತು ಕೇಂದ್ರ ವಿಭಾಗದ ಸೈಬರ್ ಕ್ರೈಂ ಠಾಣೆಗೆ ಕೆ.ಎ. ದಯಾನಂದ್ ದೂರು ನೀಡಿದ್ದಾರೆ. ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಹುಡುಕಾಟ ಮುಂದುವರೆಸಿದ್ದಾರೆ.