Breaking News

ಹಿರಿಯ ನಟಿ ಡಾ. ಲೀಲಾವತಿ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

Spread the love

ಹಿರಿಯ ನಟಿ ಡಾ. ಲೀಲಾವತಿ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ಗೋಕಾಕ್-ಸ್ಯಾಂಡಲ್ ವುಡ್ ನ ಹಿರಿಯ ನಟಿ ಡಾ. ಲೀಲಾವತಿ ಅವರ ನಿಧನಕ್ಕೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ.

ಲೀಲಾವತಿ ಅವರ ನಿಧನದಿಂದ ಚಿತ್ರೋದ್ಯಮವೂ ಸೇರಿದಂತೆ ಇಡೀ ನಾಡೇ ಬಡವಾಗಿದೆ. ಹಲವು ವರ್ಷಗಳ ಕಾಲ ಕನ್ನಡ ಚಿತ್ರರಂಗವನ್ನು ಆಳಿದ ಅವರು, ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು.

ಬಹುಭಾಷೆ ನಟಿಯಾಗಿ ಗುರುತಿಸಿಕೊಂಡಿದ್ದ ಅವರು, ಇತ್ತೀಚೆಗೆ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ‌ಸಮಾಜಸೇವೆಯಲ್ಲಿಯೂ ಹೆಸರುವಾಸಿಯಾಗಿದ್ದರು.

ಡಾ.ಲೀಲಾವತಿಯವರ ಆತ್ಮಕ್ಕೆ ದೇವರು ಚಿರಶಾಂತಿಯನ್ನೀಡಲೆಂದು ಪ್ರಾರ್ಥಿಸಿರುವ ಅವರು, ದಿವಂಗತರ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದ್ದಾರೆ.


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ