Breaking News

ಜಮೀನೊಂದರಲ್ಲಿ ರಾತ್ರಿ ಮೆಣಸಿನಕಾಯಿ ಬೆಳೆ ಕಾಯುತ್ತಿದ್ದ ವ್ಯಕ್ತಿಯ ಭೀಕರ ಹತ್ಯೆ

Spread the love

ಗದಗ: ಮೆಣಸಿನಕಾಯಿ ಬೆಳೆ ಕಾಯಲು ಇದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆಗೈದು ರುಂಡ ತೆಗೆದುಕೊಂಡು ಪರಾರಿಯಾಗಿರುವ ಘಟನೆ ನಿನ್ನೆ ರಾತ್ರಿ ಗದಗ ತಾಲೂಕಿನ ತಿಮ್ಮಾಪುರ ಗ್ರಾಮದ ಜಮೀನೊಂದರಲ್ಲಿ ನಡೆದಿದೆ.

ಸಣ್ಣ ಹನಮಪ್ಪ ವಜ್ರದ (65) ಕೊಲೆಗೀಡಾದ ವ್ಯಕ್ತಿ.

ಬೆಳಗ್ಗೆ ಜಮೀನು ಮಾಲೀಕರು ಬಂದು ನೋಡಿದಾಗ ಈ ದುಷ್ಕೃತ್ಯ ಬೆಳಕಿಗೆ ಬಂದಿದೆ. ಗುಡಿಸಲಿನಲ್ಲಿ ದೇಹ ಮಾತ್ರ ಕಂಡು ಬಂದಿದೆ. ತಕ್ಷಣ ಕೊಲೆಗೆ ಸಂಬಂಧಿಸಿದಂತೆ ಜಮೀನಿನ ಮಾಲೀಕರು ಪೊಲೀಸ​ರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಗದಗ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಲೆಗೀಡಾದ ಸಣ್ಣ ಹನಮಪ್ಪ ವಜ್ರದ ‌ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಮಾಳೆಕೊಪ್ಪ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ಈ ಭೀಕರ ಕೊಲೆಯಿಂದ ಸುತ್ತಮುತ್ತಲಿನ ರೈತರು ಬೆಚ್ಚಿ ಬಿದ್ದಿದ್ದಾರೆ. ಗದಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತ್ಯೇಕ ಪ್ರಕರಣ- ವಕೀಲ ಕೊಲೆ, ಮೂವರು ಆರೋಪಿಗಳ ಬಂಧನ: ಕಲಬುರಗಿಯಲ್ಲಿ ಎರಡು ದಿನಗಳ ಹಿಂದೆ ನಡೆದಿದ್ದ ವಕೀಲ ಈರಣ್ಣಗೌಡ ಪಾಟೀಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಲ್ಲಿನಾಥ್ ತಂದೆ ಬಸಣ್ಣ ಉದನೂರ್ (45), ಭಾಗಣ್ಣ ಅಲಿಯಾಸ್ ಭಗವಾನ್ ತಂದೆ ಅವಣಪ್ಪ ಉದನೂರ್ (20), ಅವಣಪ್ಪ ತಂದೆ ಭಾಗವಂತರಾವ್ ಉದನೂರ್ (48) ಬಂಧಿತರು.‌

ಕೊಲೆ ಸಂಬಂಧ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಘಟನೆ ನಡೆದ 24 ಗಂಟೆಯೊಳಗೆ ಮೂವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳ ಬಂಧನಕ್ಕೆ ನಗರ ಪೊಲೀಸ್ ಆಯುಕ್ತರು ಎರಡು ವಿಶೇಷ ತಂಡ ರಚಿಸಿದ್ದರು.

ನಗರ ಪೊಲೀಸ್ ಆಯುಕ್ತ ಚೇತನ್‌ ಆರ್ ಮಾತನಾಡಿ, ”ವಕೀಲ ಈರಣ್ಣಗೌಡ ಪಾಟೀಲ್ ಎಂಬವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಮೃತರ ಸಂಬಂಧಿಕರು ನೀಡಿದ ದೂರಿನನ್ವಯ ವಿ ವಿ ಠಾಣೆಯಲ್ಲಿ ಸೆಕ್ಷನ್ 320/23, 143, 147,148, 120 ಡಿ, 302 ಐಪಿಸಿ ಅಡಿ ನಾವು ಕೇಸ್​ ದಾಖಲಿಸಿದ್ದೇವೆ. ಇದರಲ್ಲಿ ಸುಮಾರು ಏಳು ಜನ ಆರೋಪಿಗಳ ವಿರುದ್ಧ ಎಂದು ಕುಟುಂಬಸ್ಥರು ದೂರು ನೀಡಿದ್ದರು. ಈ ಸಂಬಂಧ ದೂರು ದಾಖಲಿಸಿಕೊಂಡಿದ್ದ ಯೂನಿವರ್ಸಿಟಿ ಪೊಲೀಸರು ಆರೋಪಿಗಳನ್ನು ಒಂದೇ ದಿನದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೂವರು ಆರೋಪಿಗಳನ್ನು ಅರೆಸ್ಟ್​ ಮಾಡಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನಂತರ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ಮಾಡಬೇಕಾಗುತ್ತದೆ. ಮೇಲ್ನೋಟಕ್ಕೆ ಮೃತಪಟ್ಟಿರುವ ಈರಣ್ಣಗೌಡ ಅವರಿಗೂ ಹಾಗೂ ಅವರ ತಂದೆ ಮತ್ತು ಕೆಲವು ಸಂಬಂಧಿಕರ ನಡುವೆ ಜಮೀನು ವ್ಯಾಜ್ಯ ಇತ್ತು. ಆದರೆ ಕೊಲೆಗೆ ನಿಖರ ಕಾರಣ ಏನೆಂಬುದು ತನಿಖೆಯ ನಂತರ ಗೊತ್ತಾಗಲಿದೆ” ಎಂದು ತಿಳಿಸಿದ್ದಾರೆ.

 


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ