Breaking News

ಅಂಬೇಡ್ಕರ್​ ಮೈದಾನದಲ್ಲಿ ನಟಿ ಲೀಲಾವತಿ ಪಾರ್ಥಿವ ಶರೀರ: ಸಾರ್ವಜನಿಕರಿಂದ ಅಂತಿಮ ದರ್ಶನ

Spread the love

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಶುಕ್ರವಾರ (ನಿನ್ನೆ) ವಯೋಸಹಜ ಕಾಯಿಲೆಯಿಂದ ವಿಧಿವಶರಾಗಿದ್ದು, ನೆಲಮಂಗಲದ ಅಂಬೇಡ್ಕರ್​ ಮೈದಾನದಲ್ಲಿ ಲೀಲಾವತಿ ಅವರ ಪಾರ್ಥಿವ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ.

ಸಾರ್ವಜನಿಕರು ಮತ್ತು ಅವರು ಹಿತೈಷಿಗಳು ಬಂದು ದರ್ಶನ ಪಡೆಯುತ್ತಿದ್ದಾರೆ.

ಇಂದು ಬೆಳಗ್ಗೆ 5:30 ರಿಂದ 10:45ರವರೆಗೂ ನೆಲಮಂಗಲದ ಡಾ.ಆರ್.ಅಂಬೇಡ್ಕರ್ ಅವರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಿನೋದ್ ರಾಜ್ ಅವರ ಒಪ್ಪಿಗೆ ಮೇರೆಗೆ 11 ಗಂಟೆಯಿಂದ 2:30 ರವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಬಯಲು ರಂಗಮಂದಿರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಮಧ್ಯಾಹ್ನ ಸಂಜೆ ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ಅವರ ತೋಟದಲ್ಲಿ ಸರ್ಕಾರಿ ಸಕಲ ಗೌರವದೊಂದಿಗೆ ಅಂತಿಮ ಸಂಸ್ಕಾರ ಮಾಡುವುದಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶಿವಶಂಕರ್ ತಿಳಿಸಿದ್ದಾರೆ. ನೆಲಮಂಗಲದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮಗ ವಿನೋದ್ ರಾಜ್ ಸೇರಿದಂತೆ ಕುಟುಂಬದ ಹಿತೈಷಿಗಳು ಸ್ಥಳದಲ್ಲಿ ಹಾಜರಿದ್ದಾರೆ.

ಅಂತ್ಯಕ್ರಿಯೆ ಬಗ್ಗೆ ವಿನೋದ್​ ರಾಜ್​ ಮಾಹಿತಿ: ಲೀಲಾವತಿ ಅಂತ್ಯಕ್ರಿಯೆ ಕುರಿತು ಮಗ ವಿನೋದ್​ ರಾಜ್​ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಅಂಬೇಡ್ಕರ್​ ಮೈದಾನ ಬಳಿಕ 11 ಗಂಟೆಗೆ ರವೀಮದ್ರ ಕಲಾಕ್ಷೇತ್ರದಲ್ಲಿ ಇರಿಸಲಾಗುತ್ತದೆ. ಅಂತ್ಯಸಂಸ್ಕಾರವನ್ನು ಸೋಲದೇವನಹಳ್ಳಿ ತೋಟದ ಮನೆಯಲ್ಲಿ ನಡೆಸಲಾಗುತ್ತೆ ಎಂದು ಹೇಳಿದ್ದಾರೆ.

ಅಂತಿಮ‌ ದರ್ಶನ ಪಡೆದ ಆರ್.ಅಶೋಕ್: ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ನಟಿ ಲೀಲಾವತಿ ‌ಅವರ ಅಂತಿಮ‌ ದರ್ಶನ ಪಡೆದು, ಹಿರಿಯ ನಟಿಗೆ ನಮನ ಸಲ್ಲಿಸಿದರು. ಕನ್ನಡ ಚಿತ್ರರಂಗದ ಹಿರಿಯ ನಟಿ, ನಟ ವಿನೋದ್ ರಾಜ್ ಅವರ ತಾಯಿ, ಲೀಲಾವತಿ ಅವರ ನಿಧನದಿಂದಾಗಿ ಕನ್ನಡ ಚಿತ್ರರಂಗ‌ ಅಮೂಲ್ಯ ರತ್ನವೊಂದನ್ನು ಕಳೆದುಕೊಂಡಂತಾಗಿದೆ. ಲೀಲಾವತಿ ಅವರು ಸುಮಾರು 600 ಕ್ಕೂ ಅಧಿಕ ಬೇರೆ ಬೇರೆ ಭಾಷೆಯ ಸಿನಿಮಾಗಳಲ್ಲಿ ನಟಿಸುವ ಮೂಲಕ ಬಹುಭಾಷಾ ತಾರೆ ಎನಿಸಿಕೊಂಡಿದ್ದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ