Breaking News

ಮಹಿಳೆಯನ್ನು ಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಥಳಿಸಿರುವ ಹೀನ ಕೃತ್ಯ, ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ

Spread the love

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಮಹಿಳೆಯನ್ನು ಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಥಳಿಸಿರುವ ಹೀನ ಕೃತ್ಯ ಬೆಳಗಾವಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

 

ಪ್ರೀತಿಸಿದ ಜೋಡಿ ಮನೆ ಬಿಟ್ಟು ಹೋಗಿದ್ದರಿಂದ ಯುವಕನ ತಾಯಿಯ ಮೇಲೆ ಯುವತಿಯ ಕುಟುಂಬಸ್ಥರು ದೌರ್ಜನ್ಯ ಮೆರೆದಿದ್ದಾರೆ. 42 ವರ್ಷ ವಯಸ್ಸಿನ ಮಹಿಳೆ ಹಲ್ಲೆಗೆ ಒಳಗಾದವರು. ಕಂಬಕ್ಕೆ ಕಟ್ಟಿ ಬೆತ್ತಲೆ ಮಾಡಿ ಕೀಚಕರು ಅಮಾನವೀಯವಾಗಿ ವರ್ತಿಸಿದ್ದಾರೆ.

ಯುವತಿಗೆ ಇಂದು ನಿಶ್ಚಯವಾಗಿದ್ದ ನಿಶ್ಚಿತಾರ್ಥ: ಯುವಕ ಮತ್ತು ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ನಿನ್ನೆ ರಾತ್ರಿ ಮನೆ ಬಿಟ್ಟು ಈ ಪ್ರೇಮಿಗಳು ಓಡಿ ಹೋಗಿದ್ದಾರೆ. ಯವತಿಗೆ ಬೇರೆ ವರನನ್ನು ನೋಡಿದ್ದು, ಇಂದು ನಿಶ್ಚಿತಾರ್ಥ ಹಮ್ಮಿಕೊಳ್ಳಲಾಗಿತ್ತು. ಮದುವೆಯನ್ನು ಸಹ ಕುಟುಂಬಸ್ಥರು ನಿಗದಿ ಮಾಡಿದ್ದರು. ಇದರಿಂದ ರೊಚ್ಚಿಗೆದ್ದ ಯುವತಿ ಕುಟುಂಬಸ್ಥರು ಯುವಕನ ಮನೆ ಮೇಲೆ ದಾಳಿ ಮಾಡಿ, ಮನೆಯನ್ನು ಸಂಪೂರ್ಣ ಧ್ವಂಸಗೊಳಿಸಿದ್ದಾರೆ.

ಯುವತಿ ತಾಯಿಯನ್ನು ಬೆತ್ತಲೆಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ. ಅಲ್ಲದೇ ಗ್ರಾಮದಲ್ಲಿ ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿದ್ದಾರೆ. ತಡರಾತ್ರಿ ಸ್ಥಳಕ್ಕೆ ಕಾಕತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ಸಂಬಂಧ 7 ಜನ ಆರೋಪಿಗಳನ್ನು ಬಂಧಿಸಲಾಗಿದೆ.

ಇಂದು ಬೆಳಗ್ಗೆ ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ ಅವರು ಕೂಡ ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಓಡಿ ಹೋಗಿರುವ ಯುವಕ, ಯುವತಿಗೆ ಪೊಲೀಸರ ಶೋಧ ಕಾರ್ಯ ಆರಂಭಿಸಿದ್ದಾರೆ. ಗ್ರಾಮದಲ್ಲಿ 2 ಕೆಎಸ್ ಆರ್ ಪಿ ತುಕಡಿ ಮತ್ತು ಪೊಲೀಸ್ ಬಂದೋಬಸ್ತ್​ ಅನ್ನು ಸಹ ನಿಯೋಜಿಸಲಾಗಿದೆ.


Spread the love

About Laxminews 24x7

Check Also

ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ

Spread the love ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ ಮೈಸೂರು: ಕನ್ನಡಕ್ಕೆ ಮೊದಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ