Home / ಜಿಲ್ಲೆ / ಬೆಳಗಾವಿ / ಗೋಕಾಕ / ಸಣ್ಣಪುಟ್ಟ ಸಮಾಜವಿರಲಿ,ದೊಡ್ಡ ಸಮಾಜವಿರಲಿ. ಈ ಎಲ್ಲ ಸಮಾಜಗಳ ಅಭಿವೃದ್ಧಿಗೆ ಬದ್ಧನಿರುವೆ.: ಬಾಲಚಂದ್ರ ಜಾರಕಿಹೊಳಿ

ಸಣ್ಣಪುಟ್ಟ ಸಮಾಜವಿರಲಿ,ದೊಡ್ಡ ಸಮಾಜವಿರಲಿ. ಈ ಎಲ್ಲ ಸಮಾಜಗಳ ಅಭಿವೃದ್ಧಿಗೆ ಬದ್ಧನಿರುವೆ.: ಬಾಲಚಂದ್ರ ಜಾರಕಿಹೊಳಿ

Spread the love

ಮೂಡಲಗಿ: ( ಹಕ್ಕ- ಬುಕ್ಕ ವೇದಿಕೆ ಸುಣಧೋಳಿ) – ಸಣ್ಣಪುಟ್ಟ ಸಮಾಜವಿರಲಿ,ದೊಡ್ಡ ಸಮಾಜವಿರಲಿ. ಈ ಎಲ್ಲ ಸಮಾಜಗಳ ಅಭಿವೃದ್ಧಿಗೆ ಬದ್ಧನಿರುವೆ. ಸಮಾಜಗಳ ಅಶೋತ್ತರಗಳಿಗೆ ಸ್ಪಂದಿಸುವ ಮೂಲಕ ಎಲ್ಲ ಸಮುದಾಯಗಳಿಗೆ ಬೆನ್ನಲಬು ಆಗಿ ಕೆಲಸ ಮಾಡುತ್ತೇನೆ ಎಂದು ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಅವರು, ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ರವಿವಾರದಂದು ಜರುಗಿದ ಭಕ್ತ ಕನಕದಾಸರ 536ನೇ ಜಯಂತಿ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲ ಸಮುದಾಯಗಳ ಆಶೀರ್ವಾದದಿಂದ ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಯ ಮತಗಳ ಅಂತರದಿಂದ ಜಯಗಳಿಸಿದ್ದಾಗಿ ಅವರು ತಿಳಿಸಿದರು.

ಸಮಾಜದ ಅಭಿವೃದ್ಧಿಯಲ್ಲಿ ಶಿಕ್ಷಣ,ಸಂಘಟನೆ ಮತ್ತು ಹೋರಾಟ ಅಗತ್ಯವಾಗಿದೆ. ಇವುಗಳನ್ನು ಮೈಗೂಡಿಸಿಕೊಂಡರೆ ಸಮಾಜದಲ್ಲಿ ಮುಂದೆ ಬರಲು ಸಾಧ್ಯವಾಗುತ್ತದೆ. ಶಿಕ್ಷಣದಿಂದ ಸಮಾಜ ಪರಿವರ್ತನೆ ಹೊಂದಲು ಸಾಧ್ಯವೆಂದು ಹೇಳಿದರು.
ಕಳೆದ ಚುನಾವಣೆಯಲ್ಲಿ ಹಾಲುಮತ ಸಮಾಜ ಬಾಂಧವರು ತಮ್ಮ ಜಾತಿಯ ಅಭ್ಯರ್ಥಿ ನೋಡದೇ ನನ್ನನ್ನು ಗೆಲ್ಲಿಸಿದ್ದಾರೆ. ಕುರುಬ ಸಮಾಜದವರೊಬ್ಬರು ಕ್ಷೇತ್ರದಿಂದ ಕಾಂಗ್ರೇಸ್ ಅಭ್ಯರ್ಥಿಯಾಗಿದ್ದರೂ ಇದಾವದನ್ನು ಲೆಕ್ಕಿಸದೇ ಸಮಾಜದವರು ನನಗೆ ಅಮೂಲ್ಯ ಮತ ನೀಡಿ ಗೆಲ್ಲಿಸಿ ಕೊಟ್ಟಿದ್ದಾರೆ. ಹಾಲುಮತ ಕುರುಬ ಸಮಾಜ ಸೇರಿದಂತೆ ಎಲ್ಲ ಸಮಾಜಗಳು ನನಗೆ ಬೆಂಬಲ ನೀಡಿದ್ದಾರೆ. ಈ ಎಲ್ಲ ಸಮಾಜಗಳ ಬಾಂಧವರಿಗೆ ನಮನ ಸಲ್ಲಿಸುವುದಾಗಿ ಅವರು ತಿಳಿಸಿದರು.

ಮೂಡಲಗಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ನೆರವು ನೀಡಲಾಗುವುದು. ಇದರ ಜೊತೆಗೆ ಆಯಾ ಸಮಾಜಗಳ ಬೇಡಿಕೆಗಳಿಗೂ ಸ್ಪಂದಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು.

2019ರಲ್ಲಿ ಸಂಭವಿಸಿದ ಪ್ರವಾಹ ಸಂದರ್ಭದಲ್ಲಿ ಅರಭಾವಿ ಮತಕ್ಷೇತ್ರದ ನದಿತೀರದ ಗ್ರಾಮಗಳಿಗೆ ಸುಮಾರು 9 ಸಾವಿರ ಮನೆಗಳನ್ನು ನಿರ್ಮಿಸಲಾಗಿದೆ. ಇದು ಬಿಜೆಪಿ ಸರ್ಕಾರದಲ್ಲಿ ನನಗೆ ನೀಡಿರುವ ಅತ್ಯಧಿಕ ಮನೆಗಳಾಗಿವೆ ಆದರೂ ಇನ್ನೂ ಕೆಲವರು ಮನೆಗಳ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಶೇ.90ರಷ್ಟು ಒಳ್ಳೇಯ ಕಾರ್ಯಗಳನ್ನು ಮಾಡಿದರೂ ಕೆಲವರಿಗೆ ಸಹಿಸಲು ಆಗುತ್ತಿಲ್ಲ ಎಂದು ಹೇಳಿದರು.
ಇಂದಿನ ಯುವ ಪೀಳಿಗೆಗೆ ಹಿಂದಿನ ಗತಕಾಲದ ಇತಿಹಾಸ, ವೈಭವ ಪರಂಪರೆಯನ್ನು ತಿಳಿಸಬೇಕಾಗಿದೆ. ಮಹಾನ್ ಪುರುಷರ ತತ್ವಾದರ್ಶಗಳನ್ನು ಕೂಡಾ ಅವರಿಗೆ ತಿಳಿಸಿ ಜಾಗೃತಿಗೊಳಿಸಬೇಕಾಗಿದೆ. ಈ ಹಿನ್ನಲೆಯಲ್ಲಿ ಆಯಾ ಸಮಾಜಗಳಿಗೆ ಸೇರಿರುವ ಮಹಾನ್ ಪುರುಷರ ಜಯಂತಿ ಕಾರ್ಯಕ್ರಮಗಳನ್ನು ಪ್ರತಿವರ್ಷವೂ ಆಯೋಜನೆ ಮಾಡಲಾಗುತ್ತಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ವಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸುಣಧೋಳಿಯ ಶಿವಾನಂದ ಮಹಾಸ್ವಾಮಿಗಳು, ಕವಲಗುಡ್ಡದ ಅಮರೇಶ್ವರ ಮಹಾರಾಜರು ವಹಿಸಿ ಆಶೀರ್ವಚನ ನೀಡಿದರು.

 

ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರದೇಶ ಕುರುಬರ ಸಂಘದ ನಿರ್ದೇಶಕ ರಾಜೇಂದ್ರ ಸಣ್ಣಕ್ಕಿ ಅವರು ನಮ್ಮ ಸಮಾಜವು ಅತ್ಯಂತ ವಿಶ್ವಾಸಾರ್ಹವಾಗಿದೆ. ನಮ್ಮ ಸಮಾಜಕ್ಕೆ ಸಿಎಂ ಸಿದ್ಧರಾಮಯ್ಯನವರು ಪ್ರಶ್ನಾತೀತ ನಾಯಕರು. ಇಡೀ ಕುರುಬ ಸಮಾಜವು ಅವರ ಬೆಂಬಲಕ್ಕಿದೆ. ಜೊತೆಗೆ ಜಾರಕಿಹೊಳಿ ಸಹೋದರರೊಂದಿಗೆ ನಾವೆಲ್ಲರೂ ಗುರುತಿಸಿಕೊಂಡಿದ್ದೇವೆ. ನಮ್ಮ ಸಮಾಜಕ್ಕೆ ಜಾರಕಿಹೊಳಿ ಸಹೋದರರು ದೊಡ್ಡ ಶಕ್ತಿಯಾಗಿದ್ದಾರೆ ಎಂದು ಹೇಳಿದರು.

ವೇದಿಕೆಯಲ್ಲಿ ಕಳ್ಳಿಗುದ್ದಿ-ಕಪರಟ್ಟಿಯ ಬಸವರಾಜ ಸ್ವಾಮಿಗಳು ಹಿರೇಮಠ, ಜೋಕಾನಟ್ಟಿಯ ಬಿಳಿಯಾನಸಿದ್ಧ ಸ್ವಾಮಿಗಳು, ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ, ಮುಖಂಡರಾದ ವಿಠ್ಠಲ ಪಾಟೀಲ, ಕೆಂಚನಗೌಡ ಪಾಟೀಲ, ಡಾ: ಎಸ್.ಎಸ್.ಪಾಟೀಲ, ಶಿವನಗೌಡ ಪಾಟೀಲ, ಭೀಮಶಿ ಮಗದುಮ್, ಲಕ್ಷ್ಮಣ ಮಸಗುಪ್ಪಿ, ಬಸಗೌಡ ಪಾಟೀಲ, ರಾಮಣ್ಣ ಮಹಾರಡ್ಡಿ, ಮನು ಗಡಾದ, ಸಿದ್ಧಲಿಂಗಪ್ಪ ಕಂಬಳಿ, ಅಜ್ಜಪ್ಪ ಗಿರಡ್ಡಿ, ಗಿರೀಶ ಹಳ್ಳೂರ, ರಂಗಪ್ಪ ಇಟ್ಟನ್ನವರ, ಹಣಮಂತ ಗುಡ್ಲಮನಿ, ಲಕ್ಷ್ಮಣ ಗಣಪ್ಪಗೋಳ, ಶಂಕರ ಬಿಲಕುಂದಿ, ಅಡಿವೆಪ್ಪ ಅಳಗೋಡಿ, ಮಲ್ಲಿಕಾರ್ಜುನ ವಡೇರ ಸೇರಿದಂತೆ ವಿವಿಧ ಸಮಾಜಗಳ ಮುಖಂಡರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕುರುಬ ಸಮಾಜದ ಗ್ರಾ.ಪಂ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಸಮಾಜದ ಅಧಿಕಾರಿಗಳನ್ನು ಕಾರ್ಯಕ್ರಮದಲ್ಲಿ ಸತ್ಕರಿಸಲಾಯಿತು.

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಅದ್ದೂರಿಯಾಗಿ ಮೆರವಣಿಗೆ ಮೂಲಕ ಸಮಾರಂಭದ ವೇದಿಕೆಗೆ ಕರೆ ತರಲಾಯಿತು. ಸುಣಧೋಳಿ ಗ್ರಾಮವು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಮುಖಂಡರು ಶಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು.


Spread the love

About Laxminews 24x7

Check Also

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

Spread the loveಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ