Breaking News

ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಧೈರ್ಯ ತುಂಬಿದ ಗೃಹ ಸಚಿವರು

Spread the love

ಬೆಳಗಾವಿ: ಜಿಲ್ಲೆಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ಅಮಾನವೀಯ ಘಟನೆಗೆ ಗೃಹಸಚಿವ ಜಿ.ಪರಮೇಶ್ವರ್​ ಪ್ರತಿಕ್ರಿಯಿಸಿದ್ದಾರೆ. ಇದಕ್ಕೂ ಮುನ್ನ ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ಮಹಿಳೆಯ ಆರೋಗ್ಯವನ್ನು ಗೃಹ ಸಚಿವರು ವಿಚಾರಿಸಿದರು.

ಹಲ್ಲೆಗೊಳಗಾದ ಮಹಿಳೆಯಿಂದ ಗೃಹ ಸಚಿವ ಜಿ ಪರಮೇಶ್ವರ್​ ಅವರು ಘಟನೆ ಕುರಿತು ಮಾಹಿತಿ ಪಡೆದು, ಧೈರ್ಯ ತುಂಬಿದರು. ಈ ವೇಳೆ ಗೃಹಸಚಿವರೊಂದಿಗೆ ನಗರ ಪೊಲೀಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಜೊತೆಗಿದ್ದರು.

ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಾ. ಜಿ. ಪರಮೇಶ್ವರ್, 24 ವರ್ಷದ ಯುವಕ ಯುವತಿಯನ್ನು ಜತೆಗೆ ಕರೆದುಕೊಂಡು ಹೋಗಿದ್ದಾನೆ. ಹುಡುಗ ಹುಡುಗಿ ಪ್ರೀತಿಸುತ್ತಿದ್ದರು ಎನ್ನುವ ಮಾಹಿತಿ ಇದೆ. ಇದರಿಂದ ಯುವಕನ ತಾಯಿ ಮೇಲೆ ಹಲ್ಲೆ ಮಾಡಿದ್ದಾರೆ. ಸುಮಾರು 8 ರಿಂದ 10 ಜನ ಹಲ್ಲೆ ಮಾಡಿ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿದ್ದಾರೆ.

ಪೊಲೀಸರಿಗೆ ವಿಷಯ ತಿಳಿದ ಬಳಿಕ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಸದ್ಯ ಅವರಿಗೆ ಚಿಕಿತ್ಸೆ ನಡೆಯುತ್ತಿದೆ. ಪೊಲೀಸರು ಈಗಾಗಲೇ 7 ಜನರನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳನ್ನು ಬಂಧಿಸಬೇಕಿದೆ. ಅವರನ್ನೂ ಸಹ ಪೊಲೀಸರು ಬಂಧನ ಮಾಡುತ್ತಾರೆ ಎಂದರು. ಓಡಿ ಹೋಗಿರುವ ಯುವಕ ಯುವತಿಯನ್ನು ಪೊಲೀಸರು ಹುಡುಕಾಡುತ್ತಿದ್ದಾರೆ. ಇಂತಹ ಘಟನೆಗಳು ಆಗಬಾರದು, ಪೊಲೀಸರಿಗೆ ದೂರು ನೀಡಿದ್ದರೆ ಪೊಲೀಸರೇ ಕ್ರಮ ತೆಗೆದುಕೊಳ್ಳುತ್ತಿದ್ದರು. ಅಥವಾ ಊರಲ್ಲಿ ಹಿರಿಯರು ಮಾತನಾಡಿಕೊಂಡು ಬಗೆಹರಿಸಬಹದಿತ್ತು. ಆದರೆ ಇದೊಂದು ಅಮಾನವೀಯ ಘಟನೆ. ಸ್ಥಳಕ್ಕೂ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ಗೃಹ ಸಚಿವರು ಹೇಳಿದರು.

ಗೃಹ ಸಚಿವರ ಕಾಲಿಗೆ ಬಿದ್ದು ಕಣ್ಣೀರು ಹಾಕಿದ ಅಜ್ಜಿ: ಮಹಿಳೆಯನ್ನು ಬೆತ್ತಲೆಗೊಳಿಸಿ ಅಮಾನವೀಯವಾಗಿ ಹಲ್ಲೆ ಮಾಡಿದ್ದರಿಂದ ಅವರ ಕುಟುಂಬಸ್ಥರು ಸೇರಿ ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ. ಘಟನೆ ಬಗ್ಗೆ ಮಾಹಿತಿ ಪಡೆಯಲು ಬಂದ ವೇಳೆ ಆ ಕುಟುಂಬದ ಅಜ್ಜಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಕಾಲಿಗೆ ಬಿದ್ದು ಕಣ್ಣೀರು ಹಾಕಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ