Breaking News

ಪೊಲೀಸರ ಕಿರುಕುಳದಿಂದ ನೊಂದ ಒಂದೇ ಕುಟುಂಬದ ನಾಲ್ವರು ಚಲಿಸುತ್ತಿದ್ದ ರೈಲಿಗೆ ಹಾರಿ ಆತ್ಮಹತ್ಯೆ

Spread the love

ವಿಶಾಖಪಟ್ಟಣಂ: ಪೊಲೀಸರ ಕಿರುಕುಳದಿಂದ ನೊಂದ ಒಂದೇ ಕುಟುಂಬದ ನಾಲ್ವರು ಚಲಿಸುತ್ತಿದ್ದ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ನ ಪನ್ಯಂ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.
ನವೆಂಬರ್ 3 ರಂದು ಈ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಶರಣಾದ ಶೇಕ್ ಅಬ್ದುಲ್ ಸಲಾಮ್ (45), ಪತ್ನಿ ನೂರ್ಜಾನ್ (43) ಮಗ ದಾದಾ ಖಲಂದರ್ (9) ಹಾಗೂ ಮಗಳು ಸಲ್ಮಾ (14) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಪೆÇಲೀಸರು ತಮಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ವಿಡಿಯೋ ಮಾಡಿದ್ದಾರೆ. ಈ ಸಂಬಂಧ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ.

ಶೇಕ್ ಅವರು ಆಭರಣದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆಭರಣ ಕಳ್ಳತನದ ಆರೋಪವನ್ನು ಹೊರಿಸಿ ಕೆಲಸದಿಂದ ತೆಗೆದು ಹಾಕಲಾಗಿತ್ತು. ಬಳಿಕ ಶೇಕ್ ಅಬ್ದುಲ್‍ನನ್ನು ಪೊಲೀಸರು ಬಂಧಿಸಿ ಜೈಲಿಗೆ ಹಾಕಿದ್ದರು. ಜಾಮೀನು ಪಡೆದುಕೊಂಡ ಬಳಿಕ ಪೆÇಲೀಸರು ಕಿರುಕುಳ ನೀಡುತ್ತಿದ್ದರು. ಇದರಿಂದ ನೊಂದ ಶೇಕ್ ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ ಎನ್ನಲಾಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ