Breaking News

ಬೆಳಗಾವಿ ಸುವರ್ಣಸೌಧದಲ್ಲಿ ಕ್ಯಾಬಿನೆಟ್ ಸಭೆ ನಡೆಸುವ ಬೇಡಿಕೆಯ ಬಗ್ಗೆ ಪರಿಶೀಲಿಸಲಾಗುವುದು ಎಂದ ಸಿಎಂ

Spread the love

ಬೆಳಗಾವಿ : ಸುವರ್ಣಸೌಧದಲ್ಲಿ ಕ್ಯಾಬಿನೆಟ್ ಸಭೆ ನಡೆಸುವ ಬೇಡಿಕೆಯ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಇಲ್ಲಿ ಕ್ಯಾಬಿನೆಟ್ ಸಭೆಗಳನ್ನು ನಡೆಸಬೇಕು ಎನ್ನುವುದೂ ಸೇರಿ ಬಿ.ಎಲ್.ಶಂಕರ್ ಅವರು ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಆ ಬಗ್ಗೆ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.

ಸುವರ್ಣ ಸೌಧದ ವೈಭವದ ಹೊರ ಆವರಣದಲ್ಲಿ ನಡೆದ “ಕರ್ನಾಟಕ” ನಾಮಕರಣ ಸುವರ್ಣ ಮಹೋತ್ಸವದಲ್ಲಿ ಮಾತನಾಡಿದ ಸಿಎಂ, ತ್ಯಾಗ ಮತ್ತು ಬಲಿದಾನದ ಮೂಲಕ ನಾಡು ಏಕೀಕರಣಗೊಂಡು ಕನ್ನಡ ನಾಡು ಉದಯವಾಯಿತು. ಕನ್ನಡ ನೆಲ-ಜಲ-ಭಾಷೆ-ಗಡಿ ರಕ್ಷಣೆಗೆ ನಾವು ಬದ್ಧರಾಗಿರುವುದೇ, ಕನ್ನಡ ವಾತಾವರಣ ನಿರ್ಮಾಣ ಮಾಡಿ ವಿಸ್ತರಿಸುವುದೇ ತ್ಯಾಗ ಬಲಿದಾನ ಮಾಡಿದ ಎಲ್ಲರಿಗೂ ನಾವು ಕೊಡುವ ಗೌರವ ಎಂದರು.

ಅಭಿವೃದ್ಧಿಯಲ್ಲಿ ದಾಪುಗಾಲು ಹಾಕುತ್ತಿದೆ : ಸುವರ್ಣ ಸಂಭ್ರಮಾಚರಣೆ ಹಾಗೂ ಕರ್ನಾಟಕ ವಿಧಾನ ಮಂಡಲದ ಮಾಜಿ ಸಭಾಪತಿ ಅವರು ಹಾಗೂ ಸಭಾಧ್ಯಕ್ಷರುಗಳ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕಳೆದ ಐವತ್ತು ವರ್ಷಗಳ ಅವಧಿಯಲ್ಲಿ ರಾಜ್ಯವು ಪ್ರತಿಯೊಂದು ಕ್ಷೇತ್ರದಲ್ಲಿ ಅಭಿವೃದ್ಧಿಯ ದಾಪುಗಾಲು ಹಾಕುತ್ತಿದೆ. ಪ್ರಾಚೀನ ಹಾಗೂ ಮಧ್ಯಕಾಲೀನ‌ ಇತಿಹಾಸದ ಪುಟಗಳನ್ನು ತಿರುವಿದಾಗ ಈ ನಾಡು ಭವ್ಯ ಪರಂಪರೆ, ಭೌಗೋಳಿಕ ವ್ಯಾಪ್ತಿ ಹೊಂದಿತ್ತು ಎಂದು ತಿಳಿಯುತ್ತದೆ. ಸಂಗೀತ, ಕಲೆ, ಸಾಂಸ್ಕೃತಿಕ ಕ್ಷೇತ್ರಕ್ಕೆ ನಾಡಿನ ಕೊಡುಗೆ ದೊಡ್ಡದು. ಶಿಕ್ಷಣ, ಔದ್ಯೋಗೀಕರಣದಲ್ಲಿಯೂ ರಾಜ್ಯ ಪ್ರಗತಿ ಸಾಧಿಸಿದೆ. ಕನ್ನಡ ಎಂಟು ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿರುವುದು ಹೆಮ್ಮೆಯ ಸಂಗತಿಯಾಗಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ