Breaking News
Home / ರಾಜಕೀಯ / 34,115 ಕೋಟಿ ರೂ ಮೊತ್ತದ ಬಂಡವಾಳ ಹೂಡಿಕೆ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ :ಎಂ.ಬಿ.ಪಾಟೀಲ

34,115 ಕೋಟಿ ರೂ ಮೊತ್ತದ ಬಂಡವಾಳ ಹೂಡಿಕೆ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ :ಎಂ.ಬಿ.ಪಾಟೀಲ

Spread the love

ಬೆಳಗಾವಿ:ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ, ಒಟ್ಟು 34,115 ಕೋಟಿ ರೂ ಮೊತ್ತದ ಬಂಡವಾಳ ಹೂಡಿಕೆ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಯಿತು.

 

ಸಿಎಂ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ನಡೆದ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ, ಹೆಚ್ಚುವರಿ ರೂ 13,911 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡುವ ಫಾಕ್ಸ್‌ಕಾನ್‌ ಕಂಪನಿ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ತಿಳಿಸಿದರು.

ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಫಾಕ್ಸ್‌ಕಾನ್‌ ಈಗಾಗಲೇ ರಾಜ್ಯದಲ್ಲಿ ರೂ 8,000 ಕೋಟಿ ಬಂಡವಾಳ ಹೂಡಿಕೆ ಮಾಡಲು ಅನುಮೋದನೆ ಪಡೆದಿದೆ. ಜೆಎಸ್‌ಡಬ್ಲ್ಯು ರಿನ್ಯೂ ಎನರ್ಜಿ ಫೋರ್ ಲಿಮಿಟೆಡ್ (ರೂ 4,960 ಕೋಟಿ ), ಜೆಎಸ್‌ಡಬ್ಲ್ಯು ಸ್ಟೀಲ್ ಲಿಮಿಟೆಡ್ (ರೂ 3,804 ಕೋಟಿ ),

ಟೊಯೊಟಾ ಕಿರ್ಲೋಸ್ಕರ್ ಮೋಟರ್ ಪ್ರೈವೇಟ್ ಲಿಮಿಟೆಡ್ (ರೂ 3237.30 ಕೋಟಿ ), ಟಿಆರ್‌ಐಎಲ್‌ ಬೆಂಗಳೂರು ರಿಯಲ್ ಎಸ್ಟೇಟ್ ಸಿಕ್ಸ್ ಲಿಮಿಟೆಡ್ (ರೂ 3273 ಕೋಟಿ ಹೂಡಿಕೆ), ಜಾನಕಿ ಕಾರ್ಪ್‌ ಲಿಮಿಟೆಡ್‌ (ರೂ 607 ಕೋಟಿ ಮೊತ್ತದ ಹೆಚ್ಚುವರಿ ಹೂಡಿಕೆ) ಪ್ರಸ್ತಾವನೆಗಳು ‘ಎಸ್‌ಎಚ್‌ಎಲ್‌ಸಿಸಿ’ ಅನುಮೋದನೆ ಪಡೆದಿರುವ ದೊಡ್ಡ ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಲ್ಲಿ ಸೇರಿವೆ. ಇದರಿಂದ 13,308 ಜನರಿಗೆ ಉದ್ಯೋಗ ದೊರಕುವ ನಿರೀಕ್ಷೆ ಇದೆ ಎಂದು ಸಚಿವರು ಮಾಹಿತಿ ನೀಡಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ