Breaking News
Home / ರಾಜಕೀಯ / ಗೋಕಾಕ ಜಿಲ್ಲೆಯಾದರೆ ಶಾಂತಿ ಇಲ್ಲವಾದರೆ ಕ್ರಾಂತಿ ,ಗೋಕಾಕ ಜಿಲ್ಲೆಗಾಗಿ ಬೃಹತ್ ಹೋರಾಟ

ಗೋಕಾಕ ಜಿಲ್ಲೆಯಾದರೆ ಶಾಂತಿ ಇಲ್ಲವಾದರೆ ಕ್ರಾಂತಿ ,ಗೋಕಾಕ ಜಿಲ್ಲೆಗಾಗಿ ಬೃಹತ್ ಹೋರಾಟ

Spread the love

ಗೋಕಾಕ ಜಿಲ್ಲೆಯಾದರೆ ಶಾಂತಿ ಇಲ್ಲವಾದರೆ ಕ್ರಾಂತಿ ,ಗೋಕಾಕ ಜಿಲ್ಲೆಗಾಗಿ ಬೃಹತ್ ಹೋರಾಟ.

 

 

ಗೋಕಾಕ: ಆಡಳಿತ ಹಾಗೂ ಅಭಿವೃದ್ದಿ ದೃಷ್ಠಿಯಿಂದ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕನ್ನು ಜಿಲ್ಲಾ ಕೇಂದ್ರವನ್ನಾಗಿ ಪರಿವತರ್ಿಸುವಂತೆ ಆಗ್ರಹಿಸಿ ನಗರದಲ್ಲಿಂದು ನಿಯೋಜಿತ ಗೋಕಾಕ ಜಿಲ್ಲಾ ರಚನಾ ಹೋರಾಟ ಚಾಲನಾ ಸಮಿತಿಯ ಅಧ್ಯಕ್ಷ ಮುರುಘರಾಜೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯು ಜರುಗಿತು.
ಬುಧವಾರದಂದು ನಗರದ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಆರಂಭಗೊಂಡ ಪ್ರತಿಭಟನೆಯು ಅಪ್ಸರಾ ಕೂಟ, ತಂಬಾಕು ಕೂಟ, ಬಾಫನಾ ಚೌಕ, ಅಜಂತಾ ಕೂಟ, ಆನಂದ ಚಿತ್ರಮಂದಿರ ಮಾರ್ಗವಾಗಿ ಬಸವೇಶ್ವರ ವೃತ್ತಕ್ಕೆ ಆಗಮಿಸಿ ಮಾನವ ಸರಪಳಿ ನಿಮರ್ಿಸಿ ರಸ್ತೆ ತಡೆ ನಡೆಸಲಾಯಿತು..

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು ಗೋಕಾಕನ್ನು ಕೂಡಲೇ ಜಿಲ್ಲಾ ಕೇಂದ್ರವನ್ನಾಗಿ ರಚಿಸಬೇಕು. ಈ ಹಿಂದಿನ ಮೂರು ಆಯೋಗಗಳು ಗೋಕಾಕನ್ನು ಜಿಲ್ಲೆಯನ್ನಾಗಿ ಮಾಡುವಂತೆ ಆಗಿನ ಸಕರ್ಾರಗಳಿಗೆ ತಮ್ಮ ವರದಿಗಳನ್ನು ಸಲ್ಲಿಸಿವೆ. ಕಳೆದ 40 ವರ್ಷಗಳಿಂದ ಈ ಭಾಗದ ನಾಗರೀಕರು ಗೋಕಾಕ ಜಿಲ್ಲೆಗಾಗಿ ನಿರಂತರವಾಗಿ ಹೋರಾಟಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ಆದರೆ ಗೋಕಾಕ ಜಿಲ್ಲಾ ರಚನೆಯು ಕೇವಲ ಕನಸಾಗಿಯೇ ಉಳಿದಿದೆ. ಆಡಳಿತಾತ್ಮಕ ದೃಷ್ಠಿಯಿಂದ ಭೌಗೋಳಿಕವಾಗಿ ದೊಡ್ಡದಿರುವ ಬೆಳಗಾವಿ ಜಿಲ್ಲೆಯನ್ನು ವಿಂಗಡಿಸಿ ಗೋಕಾಕನ್ನು ಹೊಸ ಜಿಲ್ಲೆಯನ್ನಾಗಿ ರಚಿಸಬೇಕು ಎಂದು ಪಟ್ಟು ಹಿಡಿದಿರುವ ಪ್ರತಿಭಟನಾಕಾರರು ಗೋಕಾಕ ಜಿಲ್ಲಾ ರಚನೆಗೆ ಸಚಿವ ಸತೀಶ ಜಾರಕಿಹೊಳಿ, ಶಾಸಕರಾದ ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಮತ್ತು ಲಖನ್ ಜಾರಕಿಹೊಳಿ ಅವರು ತಮ್ಮ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ. ಜೊತೆಗೆ ಜಾರಕಿಹೊಳಿ ಸಹೋದರರಿಗೆ ಇಡೀ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ನಾಗರೀಕರು ಶಕ್ತಿಯಾಗಿ ನಿಂತಿದ್ದಾರೆ.

 

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶದಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿ ನಮ್ಮ ನ್ಯಾಯಯುತ ಬೇಡಿಕೆಯನ್ನು ಈಡೇರಿಸಿ ಗೋಕಾಕ ಜಿಲ್ಲೆಯ ಕನಸನ್ನು ನನಸು ಮಾಡಲು ಕಾರಣಿಕರ್ತರಾಗಬೇಕೆಂದು ಪ್ರತಿಭಟನಾಕಾರರು ಜಾರಕಿಹೊಳಿ ಸಹೋದರರಲ್ಲಿ ಮನವಿ ಮಾಡಿಕೊಂಡರು.

ಪ್ರತಿಭಟನೆಯಲ್ಲಿ ಅರಭಾವಿಮಠದ ಗುರುಬಸವಲಿಂಗ ಮಹಾಸ್ವಾಮಿಗಳು, ಸುಣಧೋಳಿಯ ಶಿವಾನಂದ ಮಹಾಸ್ವಾಮಿಗಳು, ಮನ್ನಿಕೇರಿಯ ಮಹಾಂತಸಿದ್ದೇಶ್ವರ ಮಹಾಸ್ವಾಮಿಗಳು, ಕಳ್ಳಿಗುದ್ದಿ-ಕಪರಟ್ಟಿ ಬಸವರಾಜ ಸ್ವಾಮಿ, ಯುವ ಧುರೀಣ ಸವರ್ೋತ್ತಮ ಜಾರಕಿಹೊಳಿ, ಮುಖಂಡ ಅಶೋಕ ಪೂಜಾರಿ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಬಸವರಾಜ ಕೋಟಗಿ, ಹಿರಿಯ ನ್ಯಾಯವಾದಿ ಬಿ.ಆರ್.ಕೊಪ್ಪ, ಮುಖಂಡರಾದ ಸಿದ್ದಲಿಂಗ ದಳವಾಯಿ, ರಾಜೇಂದ್ರ ಸಣ್ಣಕ್ಕಿ, ಅಶೋಕ ಪಾಟೀಲ, ಎಂ.ಆರ್.ಭೋವಿ, ಮಡ್ಡೇಪ್ಪ

ತೋಳಿನವರ,ಟಿ.ಆರ್.ಕಾಗಲ, ಎಸ್.ವಿ.ದೇಮಶೆಟ್ಟಿ, ಬಸವರಾಜ ಖಾನಪ್ಪನವರ, ಕಿರಣ ಡಮಾಮಗರ, ಸದಾಶಿವ ಗುದಗಗೋಳ, ಮಹಾದೇವ ಶೆಕ್ಕಿ, ಶಂಕರ ಬಿಲಕುಂದಿ, ವಿಠ್ಠಲ ಸವದತ್ತಿ, ಎ.ಟಿ.ಗಿರಡ್ಡಿ, ಸತ್ತೇಪ್ಪ ಕರವಾಡೆ, ರಮೇಶ ಮಾದರ, ಕುತುಬುದ್ದೀನ ಗೋಕಾಕ, ಭೀಮಶಿ ಭರಮನ್ನವರ, ಮಹಾಂತೇಶ ಕಡಾಡಿ, ಲಖನ್ ಸಂಸೌದ್ದಿ, ದಸ್ತಗೀರ ಪೈಲವಾನ, ಗೋಕಾಕ-ಮೂಡಲಗಿ ತಾಲೂಕಿನ ಎಲ್ಲ ಚುನಾಯಿತ ಪ್ರತಿನಿಧಿಗಳು, ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ನ್ಯಾಯವಾದಿಗಳು ಕಾರ್ಯಕಲಾಪಗಳನ್ನು ಬಹಿಷ್ಕರಿಸಿ ಈ ಹೋರಾಟದಲ್ಲಿ ಭಾಗಿಯಾಗಿದ್ದರು. ಟೈರ್ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಅಕ್ರೋಶ ವ್ಯಕ್ತಪಡಿಸಿದರು.

 

 


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ