Breaking News

ನಾನು ಸಿಎಲ್‌ಪಿ ಸಭೆಗೆ ಹೋಗಿಲ್ಲ, ನಾನು ಡಿಸಿಎಂ ಕರೆದ ಭೋಜನಕೂಟಕ್ಕೆ ಹೋಗಿದ್ದೆ

Spread the love

ಬೆಳಗಾವಿ : ನಾನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹೋಗಿಲ್ಲ. ನಾನು ಡಿಸಿಎಂ ಡಿಕೆ ಶಿವಕುಮಾರ್​ ಕರೆದ ಭೋಜನಕೂಟಕ್ಕೆ ಮಾತ್ರ ಹೋಗಿದ್ದು ಎಂದು ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ತಿಳಿಸಿದರು.

ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹಾಜರಾದ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ನಾನು ನಿನ್ನೆ 8 ಗಂಟೆಯಿಂದ 10 ಗಂಟೆ ತನಕ ವಿಜಯೇಂದ್ರ ಜೊತೆಗೆ ಇದ್ದೆ. ನಮ್ಮ ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರು ಭೋಜನ ಕೂಟ ಇಟ್ಟುಕೊಂಡಿದ್ದರು. ಅವರ ಇಟ್ಟುಕೊಂಡಿದ್ದ

ಔತಣಕೂಟದಲ್ಲಿ ನಾನು ಭಾಗಿಯಾಗಿ ಊಟ ಮಾಡಿದೆ. ಜೊತೆಗೆ ಡಿಸಿಎಂ ಡಿಕೆ ಶಿವಕುಮಾರ್​ ಅವರು ಸಹ ನನಗೆ ಊಟಕ್ಕೆ ಆಹ್ವಾನ ಕೊಟ್ಟಿದ್ದರು. ಹೀಗಾಗಿ 11 ಗಂಟೆಗೆ ಡಿಕೆಶಿ ಕರೆದ ಔತಣಕೂಟಕ್ಕೆ ತೆರಳಿ ವಿಷ್​ ಮಾಡಿ ಬಂದೆ ಎಂದು ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ